ಹುಬ್ಬಳ್ಳಿ: ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯ ನೂತನ ಕಟ್ಟಡದ ಚಾವಣಿ ಕುಸಿದ ಘಟನೆ ನಡೆದಿದ್ದು, ಸ್ವಲ್ಪದರಲ್ಲೇ ಭಾರಿ ಅನಾಹುತ ತಪ್ಪಿದೆ.
ಕಿಮ್ಸ್ ನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ನೂತನ ಕಟ್ಟಡದಲ್ಲಿ ಚಾವಣಿಯ ಪಿಒಪಿ ಏಕಾಏಕಿ ಕುಸಿದಿದ್ದು, ಆಸ್ಪತ್ರೆ ಸಿಬ್ಬಂದಿಗಳು ಕಂಗಾಲಾಗಿದ್ದಾರೆ. ಪಿಎಂಎಸ್ ಎಸ್ ವೈ ಬಿಲ್ಡಿಂಗ್ ಇದಾಗಿದ್ದು, ಕಳೆದ ವರ್ಷವಷ್ಟೇ ಇದನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಹಸ್ತಾಂತರಿಸಲಾಗಿದೆ.
ಬರೋಬ್ಬರಿ 150 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಆಸ್ಪತ್ರೆಯ ಕಟ್ಟಡದಲ್ಲಿ ಇದೀಗ ಚಾವಣಿಯ ಪಿಒಪಿ ಕುಸಿದಿದೆ. ಘಟನಾ ಸ್ಥಳಕ್ಕೆ ಕಿಮ್ಸ್ ನಿರ್ದೇಶಕರು, ಆಡಳಿತ ಮಂಡಳಿ ಸದಸ್ಯರು ಭೇಟಿ ನೀಡಿ ಪರಿಶೀಲಿಸಿದ್ದಾರೆ.