alex Certify ದೀಪಾವಳಿ ಹಬ್ಬಕ್ಕೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ಹುಬ್ಬಳ್ಳಿ-ಮಂಗಳೂರು ನಡುವೆ ವಿಶೇಷ ರೈಲು ಸೇವೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೀಪಾವಳಿ ಹಬ್ಬಕ್ಕೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ಹುಬ್ಬಳ್ಳಿ-ಮಂಗಳೂರು ನಡುವೆ ವಿಶೇಷ ರೈಲು ಸೇವೆ

ಹುಬ್ಬಳ್ಳಿ: ಇನ್ನೇನು ಬೆಳಕಿನ ಹಬ್ಬ ದೀಪಾವಳಿ ಬಂದೇಬಿಟ್ಟಿತು. ಎಲ್ಲೆಡೆ ದೀಪಾವಳಿಗಾಗಿ ಸಿದ್ಧತೆಗಳು ಆರಂಭವಾಗಿವೆ. ಹಬ್ಬದ ಸಂದರ್ಭದಲ್ಲಿ ಊರುಗಳಿಗೆ ಹೋಗಲು ಹಾಗೂ ಹಬ್ಬದ ಬಳಿಕ ಊರಿನಿಂದ ವಾಪಾಸ್ ಆಗಲು ಪ್ರಯಾಣಿಕರಿಗೆ ಅನುಕೂಲವಾಗುವಂತೆ ರೈಲ್ವೆ ಇಲಾಖೆ ವಿಶೇಷ ರೈಲು ಸೇವೆ ಆರಂಭಿಸಿದೆ.

ಹುಬ್ಬಳ್ಳಿ, ಮಂಗಳೂರು ಪ್ರಯಾಣಿಕರಿಗೆ ನೈಋತ್ಯ ರೈಲ್ವೆ ವಲಯ ವಿಶೇಷ ರೈಲು ಸಂಚಾರ ನಡೆಸಲಿದೆ.

ದೀಪಾವಳಿ ಹಬ್ಬ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗುವುದರಿಂದ ನೈಋತ್ಯ ರೈಲ್ವೆಯು ಎಸ್​ಎಸ್​ಎಸ್​ ಹುಬ್ಬಳ್ಳಿ-ಮಂಗಳೂರು ಜಂಕ್ಷನ್ ನಡುವೆ ಒಂದು ಟ್ರಿಪ್​ ವಿಶೇಷ ಎಕ್ಸ್​​ಪ್ರೆಸ್ ರೈಲು ಓಡಿಸಲು ನಿರ್ಧರಿಸಿದೆ.

ನೈಋತ್ಯ ರೈಲ್ವೆಯು ಎಸ್​ಎಸ್​ಎಸ್ ಹುಬ್ಬಳ್ಳಿ – ಮಂಗಳೂರು ಜಂಕ್ಷನ್ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್​​ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಲಾಗಿದೆ ಎಂದು ನೈಋತ್ಯ ರೈಲ್ವೆ ವಲಯ ಪ್ರಕಟಣೆ ಹೊರಡಿಸಿದೆ.

ರೈಲು ಸಂಖ್ಯೆ 07311: ನವೆಂಬರ್​​ 2 ರಂದು ಶ್ರೀ ಸಿದ್ದಾರೂಢ ಸ್ವಾಮೀಜಿ ಹುಬ್ಬಳ್ಳಿ ಜಂಕ್ಷನ್ ರೈಲು ನಿಲ್ದಾಣದಿಂದ ಸಂಜೆ 4 ಗಂಟೆಗೆ ಹೊರಟು, ಮರುದಿನ ದಿನ ಬೆಳಗ್ಗೆ 11.25ಕ್ಕೆ ಮಂಗಳೂರು ಜಂಕ್ಷೆನ್ ತಲುಪಲಿದೆ.

ರೈಲು ಸಂಖ್ಯೆ 07312: ನವೆಂಬರ್ 3 ರಂದು ಮಂಗಳೂರು ಜಂಕ್ಷನ್‌ನಿಂದ ಮಧ್ಯಾಹ್ನ 1 ಗಂಟೆಗೆ ಹೊರಟು, ಮರುದಿನ ನವೆಂಬರ್​ 4 ರಂದು ಬೆಳಗ್ಗೆ 7 ಗಂಟೆಗೆ ಶ್ರೀ ಸಿದ್ಧಾರೂಡ ಸ್ವಾಮೀಜಿ ಹುಬ್ಬಳ್ಳಿ ಜಂಕ್ಷನ್ ತಲುಪಲಿದೆ.

ಈ ರೈಲು ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಯಶವಂತಪುರ, ಕುಣಿಗಲ್‌, ಚನ್ನರಾಯಪಟ್ಟಣೆ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು ಮತ್ತು ಬಂಟವಾಳ ನಿಲ್ದಾಣಗಳಲ್ಲಿ ನಿಲ್ಲುತ್ತದೆ.

ಈ ರೈಲು 1 ಎಸಿ ಟು ಟೈಯರ್ ಬೋಗಿಗಳು, 2 ಫಸ್ಟ್​​ ಎಸಿ ಕಮ್​​ ತ್ರಿ ಟೈಯರ್ ಬೋಗಿಗಳು​​, 3 ಎಸಿ ತ್ರಿ ಟೈಯರ್ ಬೋಗಿಗಳು, 5 ಸ್ವೀಪರ್ ಕ್ಲಾಸ್ ಬೋಗಿಗಳು, 2 ಸಾಮಾನ್ಯ ದ್ವಿತೀಯ ದರ್ಜೆ ಮತ್ತು 2 ಸೆಕೆಂಡ್ ಕ್ಲಾಸ್ ಲಗೇಜ್/ ಬ್ರೇಕ್ ವ್ಯಾನ್ ಬೋಗಿಗಳು ಸೇರಿದಂತೆ 15 ಬೋಗಿಗಳನ್ನು ಹೊಂದಿದೆ.

ಬೆಂಗಳೂರು-ಚೆನ್ನೈ ನಡುವೆಯೂ ವಿಶೇಷ ರೈಲು ಸಂಚಾರ ಮಾಡಲಿದೆ.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು-ಚೆನ್ನೈ ಎಗ್ಮೋರ್​​ ನಿಲ್ದಾಣಗಳ ನಡುವೆ ಎರಡು ಟ್ರಿಪ್​​ ವಿಶೇಷ ಎಕ್ಸ್​​ಪ್ರೆಸ್​​ (06209/06210) ರೈಲು ಸಂಚಾರ ಮಾಡಲಿದೆ.

ರೈಲು ಸಂಖ್ಯೆ 06209 ಅಕ್ಟೋಬರ್ 30 ಮತ್ತು ನವೆಂಬರ್ 3 ರಂದು ಬೆಳಿಗ್ಗೆ 8:05ಕ್ಕೆ ಕೆಎಸ್‌ಆರ್ ಬೆಂಗಳೂರಿನಿಂದ ಹೊರಟು, ಅದೇ ದಿನ ಮಧ್ಯಾಹ್ನ 2:30ಕ್ಕೆ ಚೆನ್ನ ಎನ್ನೋರ್ ನಿಲ್ದಾಣವನ್ನು ತಲುಪಲಿದೆ.

ರೈಲು ಸಂಖ್ಯೆ 06210 ಚಿನ್ನೆ ಎಗೋರ್ ನಿಲ್ದಾಣದಿಂದ ಅಕ್ಟೋಬರ್ 30 ಮತ್ತು ನವೆಂಬರ್ 3 ರಂದು ಮಧ್ಯಾಹ್ನ 3:55ಕ್ಕೆ ಹೊರಟು, ಅದೇ ದಿನ ರಾತ್ರಿ 10:50ಕ್ಕೆ ಕೆಎಸ್‌ಆ‌ರ್ ಬೆಂಗಳೂರು ತಲುಪಲಿದೆ.

ಈ ರೈಲುಯಶವಂತಪುರ, ಕೃಷ್ಣರಾಜಪುರಂ, ಬಂಗಾರಪೇಟೆ, ಜೋಲಾರ್ ಪೆಟ್ಟಿ, ಕಟ್ಟಾಡಿ, ಅರಕ್ಕೋಣಂ ಮತ್ತು ಪೆರಂಬೂರು ನಿಲ್ದಾಣಗಳಲ್ಲಿನಿಲ್ಲುತ್ತದೆ.

ಈ ರೈಲು 1 ಎಸಿ ಟು ಟೈಯರ್, 1 ಎಸಿ ತ್ರಿ ಟೈಯರ್, 11 ಸ್ವೀಪರ್ ಕ್ಲಾಸ್, 4 ಸಾಮಾನ್ಯ ದ್ವಿತೀಯ ದರ್ಜೆ ಮತ್ತು 2 ಸೆಕೆಂಡ್ ಕ್ಲಾಸ್ ಲಗೇಜ್ / ಬ್ರೇಕ್ ವ್ಯಾನ್ ಸೇರಿದಂತೆ 19 ಬೋಗಿಗಳನ್ನು ಒಳಗೊಂಡಿರುತ್ತದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...