ಬೆಂಗಳೂರು: ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವಣದಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಕಾರ್ಪೊರೇಟರ್ ಮಗಳು ನೇಹಾ ಹತ್ಯೆ ಪ್ರಕರಣಕ್ಕೂ ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ. ಕೊಲೆಯಾದ ನೇಹಾ ಹಾಗೂ ಆರೋಪಿ ಫಯಾಜ್ ಪರಸ್ಪರ ಪ್ರೀತಿಸುತ್ತಿದ್ದರು. ನಂತರ ನೇಹಾ ಫಯಾಜ್ ನಿಂದ ದೂರವಾಗಲು ಯತ್ನಿಸಿದ್ದಾಳೆ. ಇದರಿಂದ ಕೋಪಗೊಂಡ ಫಯಾಜ್ ಕೊಲೆ ಮಾಡಿದ್ದಾನೆ ಎಂದು ತಿಳಿಸಿದರು.
ಘಟನೆ ನಡೆದ ವೇಳೆ ಮಗಳ ಜೊತೆ ಇದ್ದ ತಾಯಿಯ ಮೇಲೂ ಹಲ್ಲೆ ನಡೆದಿದೆ. ನೇಹಾ ತಾಯಿಯನ್ನು ರಕ್ಷಿಸಲಾಗಿದೆ ಎಂದು ತಿಳಿಸಿದರು.
ಈ ಪ್ರಕರಣದಲ್ಲಿ ಲವ್ ಜಿಹಾದ್ ಕಂಡುಬಂದಿಲ್ಲ. ನನ್ನನ್ನು ಬಿಟ್ಟು ಬೇರೆಯವನನ್ನು ಮದುವೆ ಮಾಡಿಕೊಳ್ತೀಯಾ ಅಂತ ಕೋಪದಲ್ಲಿ ಫಯಾಜ್ ಕೊಲೆ ಮಡಿದ್ದಾನೆ. ಆರೋಪಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಇನ್ನು ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಯುವಕರ ಮೇಲೆ ಹಲ್ಲೆ ಮಾಡಿದ್ದು ದುರದೃಷ್ಟಕರ. ಕಾನೂನು ವಿರುದ್ಧವಾಗಿ ನಡೆದುಕೊಂಡವರನ್ನು ರಕ್ಷಣೆ ಮಾಡುವ ಪ್ರಶ್ನೆ ಇಲ್ಲ. ಗೃಹ ಸಚಿವನಾಗಿ ರಾಜ್ಯದ ಜನತೆಗೆ ಭರವಸೆ ಕೊಡುತ್ತೇನೆ. ಕಾನೂನು ಬಾಹಿರವಾಗಿ ನಡೆದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.