ಹುಬ್ಬಳ್ಳಿ: ಯುವಕನ ಕಿರುಕುಳಕ್ಕೆ ನೊಂದ ಕಾಲೇಜು ವಿದ್ಯಾರ್ಥಿನಿಯೊಬ್ಬಳು ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಸಿರಾಜ್ ಎಂಬ ಯುವಕ ವಿದ್ಯಾರ್ಥಿನಿಗೆ ತನ್ನನ್ನೇ ಪ್ರೀತಿಸಬೇಕು, ತನ್ನನ್ನೇ ಮದುವೆಯಗಬೇಕು ಎಂದು ಬಲವಂತ ಮಾಡುತ್ತಿದ್ದ. ವಿದ್ಯಾರ್ಥಿನಿಯ ಹಿಂದೆ ಬಿದ್ದು, ಬ್ಲ್ಯಾಕ್ ಮೇಲ್ ಮಾಡಿ ಬೆದರಿಕೆಯೊಡ್ಡುತ್ತಿದ್ದ. ಸಿರಾಜ್ ಕಾಟಕ್ಕೆ ಬೇಸತ್ತ ವಿದ್ಯಾರ್ಥಿನಿ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಯುವತಿ ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಳಾಗಿದ್ದನ್ನು ಗಮನಿಸಿದ ಕುಟುಂಬದವರು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸದ್ಯ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಕಿರುಕುಳ ನೀಡುತ್ತಿದ್ದ ಯುವಕ ಸಿರಾಜ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿರುವ ಹುಬ್ಬಳ್ಳಿ-ಧಾರವಾಡ ಪೊಲಿಸ್ ಆಯುಕ್ತ ಶಶಿಕುಮಾರ್, ವಿದ್ಯಾರ್ಥಿನಿಯಿಂದ ಮಾಹಿತಿ ಸಂಗ್ರಹಿಸಿದ್ದಾರೆ.