ಹುಬ್ಬಳ್ಳಿ : ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಕೊಲೆ ಪ್ರಕರಣದ ತನಿಖೆಯನ್ನು ಇಂದು ಸಂಜೆ ಅಥವಾ ನಾಳೆ ಸಿಐಡಿಗೆ ಹಸ್ತಾಂತರ ಮಾಡಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ಹಸ್ತಾಂತರ ಮಾಡುತ್ತೇವೆ ಎಂದು ಹೇಳಿದರು.
ಅಂಜಲಿ ಅಂಬಿಗೇರ್ ಹತ್ಯೆ ಪ್ರಕರಣದಲ್ಲಿ ಪೊಲೀಸರ ನಿರ್ಲಕ್ಷವೂ ಇರುವ ಕುರಿತು ಆರೋಪಗಳು ಕೇಳಿ ಬಂದ ನಂತರ ಈಗಾಗಲೇ ಸರ್ಕಾರ ಮೂವರನ್ನು ಅಮಾನತುಪಡಿಸಿದೆ. ಐಪಿಎಸ್ ಅಧಿಕಾರಿಯನ್ನು ಸಸ್ಪೆಂಡ್ ಮಾಡಲಾಗಿದೆ. ಈಗ ಖುದ್ದು ಗೃಹ ಸಚಿವರೇ ಹುಬ್ಬಳ್ಳಿಗೆ ಆಗಮಿಸಿ ಕಾನೂನು ಮತ್ತು ಸುವ್ಯವಸ್ಥೆ ಪರಿಶೀಲಿಸಿದ್ದಾರೆ.