alex Certify ಕೆಲಸದ ನಿರೀಕ್ಷೆಯಲ್ಲಿರುವ ಯುವಕರು, ಯುವತಿಯರಿಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಲಸದ ನಿರೀಕ್ಷೆಯಲ್ಲಿರುವ ಯುವಕರು, ಯುವತಿಯರಿಗೆ ಗುಡ್ ನ್ಯೂಸ್

ಬಳ್ಳಾರಿ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ ಇವರ ಸಂಯುಕ್ತಾಶ್ರಯದಲ್ಲಿ ಕೌಶಲ್ಯ ಮತ್ತು ರೋಜ್‌ಗಾರ್ ಮೇಳ ಅಡಿ 2025 ರ ಜನವರಿ 03 ರಂದು ನಗರದ ಡಾ.ರಾಜ್‌ಕುಮಾರ್ ರಸ್ತೆಯ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರ್ವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು(ಸ್ವಾಯತ್ತ), ಇಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಉದ್ಯೋಗ ಮೇಳದಲ್ಲಿ ಸುಮಾರು 40 ರಿಂದ 50 ಕಂಪನಿಗಳು ಭಾಗವಹಿಸಲಿದ್ದು, ನಿರುದ್ಯೋಗ ಯುವಕ, ಯುವತಿಯರಿಗೆ ಉದ್ಯೋಗ ಕಲ್ಪಿಸಲು ಉದ್ದೇಶಿಸಲಾಗಿದೆ.

ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆವುಳ್ಳ ಉದ್ಯೋಕಾಂಕ್ಷಿಗಳು ಪೂರಕ ದಾಖಲಾತಿಗಳೊಂದಿಗೆ ಮೇಳದಲ್ಲಿ ಭಾಗವಹಿಸಬಹುದಾಗಿದೆ.

ಉದ್ಯೋಗಾಕಾಂಕ್ಷಿಗಳು ನೋಂದಣಿಗಾಗಿ ಇಲಾಖೆಯಿಂದ ಸೃಜಿಸಲಾಗಿರುವ ಗೂಗಲ್ ಫಾರ್ಮ್ ಲಿಂಕ್ https://forms.gle/YhbVhDQqMmHRF1uV7 ರಲ್ಲಿ ನೋಂದಾಯಿಸಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯ ಮಿಷನ್ ಕಚೇರಿ ಅಥವಾ ದೂ.08392-294230 ಮತ್ತು ಮೊ.9844444958, 6361607038 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶ್ಯಲಾಭಿವೃದ್ಧಿ ಅಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...