ಬೆಂಗಳೂರು : ಇದುವರೆಗೆ 1.14 ಕೋಟಿ ಯಜಮಾನಿಯರು ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಕೊಂಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಖಾಸಗಿ ಸುದ್ದಿವಾಹಿನಿ ನಡೆಸಿದ ವಿಶೇಷ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇದುವರೆಗೆ 1.14 ಕೋಟಿ ಫಲಾನುಭವಿಗಳು ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಕೊಂಡಿದ್ದಾರೆ. 8 ರಿಂದ 9 ಲಕ್ಷ ಫಲಾನುಭವಿಗಳಿಗೆ ಇನ್ನೂ ಹಣ ಸಿಕ್ಕಿಲ್ಲ ಎಂದರು.
ವಿಪಕ್ಷಗಳು 5 ಗ್ಯಾರಂಟಿಗಳನ್ನು ಜಾರಿ ಮಾಡಲು ಆಗಲ್ಲ ಎಂದು ಹೇಳಿದ್ದವು, ಈಗಾಗಲೇ ನಾವು 4 ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದಿದ್ದೇವೆ. ಶೀಘ್ರದಲ್ಲೇ 5ನೇ ಗ್ಯಾರಂಟಿ ಯೋಜನೆಯನ್ನು ಜಾರಿಗೊಳಿಸುತ್ತೇವೆ ಎಂದರು.