alex Certify ‘ಗೃಹಲಕ್ಷ್ಮಿ’ ಯೋಜನೆಗೆ ಭರ್ಜರಿ ರೆಸ್ಪಾನ್ಸ್ : ಇದುವರೆಗೆ 1.6 ಕೋಟಿ ಮಹಿಳೆಯರ ನೋಂದಣಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಗೃಹಲಕ್ಷ್ಮಿ’ ಯೋಜನೆಗೆ ಭರ್ಜರಿ ರೆಸ್ಪಾನ್ಸ್ : ಇದುವರೆಗೆ 1.6 ಕೋಟಿ ಮಹಿಳೆಯರ ನೋಂದಣಿ

ಮೈಸೂರು : ಮನೆಯ ಯಜಮಾನಿಯರಿಗೆ 2,000 ರೂ. ಆರ್ಥಿಕ ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಈ ಬಗ್ಗೆ ಮಾಹಿತಿ ನೀಡಿರುವ ಸಿಎಂ ಈವರೆಗೆ 1.6 ಕೋಟಿ ಜನ ನೋಂದಣಿ ಮಾಡಿಕೊಂಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮೀ ಯೋಜನೆ ನೋಂದಣಿ ಕಾರ್ಯಕ್ಕೆ ಯಾವುದೇ ಸಮಯ ನಿಗದಿ ಇಲ್ಲ. ಈ ತಿಂಗಳಲ್ಲಿ ನೋಂದಣಿ ಮಾಡಿಸುವವರ ಸಂಖ್ಯೆ ಹೆಚ್ಚಬಹುದು. ಡಿಸೆಂಬರ್ ಅಥವಾ ಜನವರಿಯಲ್ಲಿ ಯುವನಿಧಿ ಯೋಜನೆ ಜಾರಿಯಾಗುತ್ತೆ ಎಂದು ತಿಳಿಸಿದ್ದಾರೆ.

ನಿರುದ್ಯೋಗಿ ಡಿಪ್ಲೋಮಾ, ಪದವೀಧರರಿಗೆ 2 ವರ್ಷಗಳವರೆಗೆ ಅಂದರೆ 24 ತಿಂಗಳು ಡಿಪ್ಲೋಮಾ ಮಾಡಿದವರಿಗೆ 1,500 ರೂ. ಹಾಗೂ ಪದವೀಧರರಿಗೆ 3000 ರೂ. ನಿರುದ್ಯೋಗ ಭತ್ಯೆ ನೀಡುವ ಯುವನಿಧಿ ಯೋಜನೆಯನ್ನು ಡಿಸೆಂಬರ್ ಅಥವಾ ಜನರಿಯಲ್ಲಿ ಜಾರಿಗೆ ತರುತ್ತೇವೆ ಎಂದು ಹೇಳಿದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...