ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಶಕ್ತಿ’ ಯೋಜನೆಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, ಮಹಿಳೆಯರ ಉಚಿತ ಟಿಕೆಟ್ ಮೌಲ್ಯ ಸಾವಿರ ಕೋಟಿ ದಾಟಿದೆ.
ಕಳೆದ ಜೂನ್ 11 ರಂದು ಆರಂಭವಾದ ಸರ್ಕಾರದ ಮೊದಲ ಗ್ಯಾರೆಂಟಿ ಯೋಜನೆಯಾದ ಶಕ್ತಿ ಯೋಜನೆ ಅಡಿ ಒಟ್ಟು 43 ಕೋಟಿ ಮಹಿಳೆಯರು ಓಡಾಡಿದ್ದಾರೆ.
ಇಲ್ಲಿ ತನಕ 1000,37,63,308 ಮೊತ್ತದ ಟಿಕೆಟ್ ಹರಿಯಲಾಗಿದೆ. ಬಿಎಂಟಿಸಿ – 181,43,92,688, ಎನ್ಡಬ್ಲ್ಯೂಆರ್ಟಿಸಿ – 250,37,04,865, ಕೆಎಸ್ಆರ್ಟಿಸಿ- 378,19,90,932, ಕೆಕೆಆರ್ಟಿಸಿ – 190,36,74,823. ಮೌಲ್ಯದ ಟಿಕೆಟ್ ಮಾರಾಟವಾಗಿದೆ.
ಶಕ್ತಿ ಯೋಜನೆ ಅಡಿ ರಾಜ್ಯದ ಎಲ್ಲಾ ಮಹಿಳೆಯರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಸೌಲಭ್ಯವನ್ನು ಜೂನ್ 11ರಂದು ಮಧ್ಯಾಹ್ನ 1 ಗಂಟೆಯಿಂದ ಅನ್ವಯವಾಗುವಂತೆ ಜಾರಿಗೊಳಿಸಲಾಗಿತ್ತು, ನಿಗಮದ ಬಸ್ ಗಳಲ್ಲಿ ಪ್ರಯಾಣಿಸುವ ಮಹಿಳೆಯರು ಕರ್ನಾಟಕ ರಾಜ್ಯದ ನಿವಾಸಿಗಳೆಂಬ ಪುರಾವೆಗಾಗಿ ತಮ್ಮ ಮೂಲ ದಾಖಲಾತಿಗಳನ್ನು ತೋರಿಸಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ.