ಬೆಂಗಳೂರು : ರಾಜ್ಯದಲ್ಲಿ ‘ಯುವನಿಧಿ’ ಯೋಜನೆಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, ಇದುವರೆಗೆ 67,951 ಅರ್ಜಿ ಸಲ್ಲಿಕೆಯಾಗಿದೆ ಎಂದು ತಿಳಿದು ಬಂದಿದೆ.
ರಾಜ್ಯ ಸರ್ಕಾರದ 5ನೇ ಗ್ಯಾರಂಟಿ ಯೋಜನೆ ‘ಯುವನಿಧಿ’ಗೆ ರಾಜ್ಯಾದ್ಯಂತ ಈಗಾಗಲೇ 67,951 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಅತಿಹೆಚ್ಚು 7,453 ಅಭ್ಯರ್ಥಿಗಳು ಆನ್ಲೈನ್ ಅರ್ಜಿ ಸಲ್ಲಿಸಿದ್ದಾರೆ. ರಾಜ್ಯ ಸರ್ಕಾರದ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ 2023ರ ಎಲ್ಲ ಪದವೀಧರರಿಗೆ ಹಾಗೂ ಡಿಪ್ಲೋಮಾ ಪದವೀಧರರಿಗೆ ತಲುಪಿಸಿ. ಉತ್ತಮ ನಾಳೆಗಳನ್ನು ಕಟ್ಟಿಕೊಳ್ಳಲು ಯುವಜನತೆಗೆ ನೆರವಾಗಿ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.
ಯುವನಿಧಿ ಯೋಜನೆಗೆ ಸಿಎಂ ಸಿಎಂ ಸಿದ್ದರಾಮಯ್ಯ ಇಂದು ಶಿವಮೊಗ್ಗದಲ್ಲಿ ಚಾಲನೆ ನೀಡಿದ್ದಾರೆ.
ಈ ಯೋಜನೆಯಡಿ ಪದವಿ ಪಾಸಾದವರಿಗೆ ರೂ.3000 ಮತ್ತು ಡಿಪ್ಲೋಮಾ ಪಾಸಾದವರಿಗೆ ರೂ.1500ಗಳನ್ನು ನೀಡಲಾಗುತ್ತದೆ. ಅರ್ಹರು ಸೇವಾ ಸಿಂಧು ಪೋರ್ಟಲ್, ಅಟಲ್ ಜೀ ಕೇಂದ್ರ, ಕರ್ನಾಟಕ-1 ಮತ್ತು ಇತರೆ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಿ ನೋಂದಣಿ ಮಾಡಿಸಿಕೊಳ್ಳಬಹುದು.