alex Certify ವರ್ಷದ ಮೊದಲ ದಿನವೇ ‘BMTC’ ಗೆ ಭರ್ಜರಿ ಆದಾಯ : ಕಲೆಕ್ಷನ್ ಆದ ಕಾಸು ಎಷ್ಟು..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವರ್ಷದ ಮೊದಲ ದಿನವೇ ‘BMTC’ ಗೆ ಭರ್ಜರಿ ಆದಾಯ : ಕಲೆಕ್ಷನ್ ಆದ ಕಾಸು ಎಷ್ಟು..?

ಬೆಂಗಳೂರು : ವರ್ಷದ ಮೊದಲ ದಿನವೇ ಬಿಎಂಟಿಸಿ ಭರ್ಜರಿ ಕಲೆಕ್ಷನ್ ಮಾಡಿದೆ. ಹೌದು, ಹೊಸ ವರ್ಷದ ಮೊದಲ ದಿನ ಜ.1 ರಂದು ಬಿಎಂಟಿಸಿಯಲ್ಲಿ 27,09, 659 ಮಂದಿ ಪ್ರಯಾಣಿಕರು ಸಂಚರಿಸಿದ್ದಾರೆ.

ಹೊಸ ವರ್ಷಾಚರಣೆ ಹಿನ್ನೆಲೆ ನಿನ್ನೆ ಬೆಂಗಳೂರಿನ ಹಲವು ಕಡೆ ವಿವಿಧ ಕಾರ್ಯಕ್ರಮಗಳು ನಡೆದಿದ್ದವು. ಹೊಸ ವರ್ಷಾಚರಣೆ ಹಿನ್ನೆಲೆ ಹೆಚ್ಚುವರಿ ಬಸ್ಗಳ ಸೇವೆ ನಿಯೋಜಿಸಿದ ಹಿನ್ನೆಲೆ ಬಿಎಂಟಿಸಿ ಒಂದೇ ದಿನದಲ್ಲಿ4.37 ಕೋಟಿ ರೂ.ಆದಾಯಗಳಿಸಿದೆ. ಸೋಮವಾರ ಒಂದೇ ದಿನ ಬಿಎಂಟಿಸಿಗೆ 4,37,70,000 ರೂ. ಆದಾಯ ಬಂದಿದೆ.
ಹಾಗೂ ಡಿ.31 ರಂದು ಮಧ್ಯರಾತ್ರಿ 2 ಗಂಟೆವರೆಗೂ ಬಿಎಂಟಿಸಿ ಬಸ್ ಸಂಚಾರ ವಿಸ್ತರಣೆ ಮಾಡಲಾಗಿತ್ತು. ಎಂ.ಜಿ.ರೋಡ್, ಬ್ರಿಗೇಡ್ ರೋಡ್, ಇಂದಿರಾನಗರ, ಕೋರಮಂಗಲ, ಶಾಂತಿನಗರ, ಯಲಹಂಕ ಸೇರಿ ಹಲವು ಏರಿಯಾಗಳಿಗೆ ಹೆಚ್ಚುವರಿ ಬಸ್ ಸಂಚಾರದ ವ್ಯವಸ್ಥೆ ಮಾಡಲಾಗಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...