alex Certify ‘ಹಮ್ ದಿಲ್ ದೇ ಚುಕೆ ಸನಮ್’ ಸಿನಿಮಾದಂತೆ ಪ್ರಿಯಕರನೊಂದಿಗೆ ಪತ್ನಿಯ ಮದುವೆ ಮಾಡಿಸಿದ ಪತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಹಮ್ ದಿಲ್ ದೇ ಚುಕೆ ಸನಮ್’ ಸಿನಿಮಾದಂತೆ ಪ್ರಿಯಕರನೊಂದಿಗೆ ಪತ್ನಿಯ ಮದುವೆ ಮಾಡಿಸಿದ ಪತಿ

ಪಾಟ್ನಾ: ‘ಹಮ್ ದಿಲ್ ದೇ ಚುಕೆ ಸನಮ್’ ಹಿಂದಿ ಸಿನಿಮಾ ರೀತಿಯಲ್ಲೇ ವ್ಯಕ್ತಿಯೊಬ್ಬ ಪತ್ನಿಯನ್ನು ಆಕೆಯ ಪ್ರಿಯಕರನಿಗೆ ಕೊಟ್ಟು ಮದುವೆ ಮಾಡಿಸಿದ ಘಟನೆ ನಡೆದಿದೆ.

ಬಿಹಾರದ ನವಾಡ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಪತಿ ಕೆಲಸದ ನಿಮಿತ್ತ ಹೊರಗೆ ಹೋಗಿದ್ದ ಸಂದರ್ಭದಲ್ಲಿ ತಡರಾತ್ರಿ ಮಹಿಳೆಯನ್ನು ಭೇಟಿಯಾಗಲು ಆಕೆಯ ಪ್ರಿಯಕರ ಮನೆಗೆ ಬಂದಿದ್ದಾನೆ. ಕುಟುಂಬದವರ ಕೈಗೆ ಇಬ್ಬರೂ ಸಿಕ್ಕಿ ಬಿದ್ದಿದ್ದು, ಕುಟುಂಬದ ಸದಸ್ಯರು ಮಹಿಳೆಯ ಪ್ರಿಯಕರನನ್ನು ಥಳಿಸಿದ್ದಾರೆ. ಇಬ್ಬರೂ ಊರು ಬಿಟ್ಟು ಹೋಗುವಂತೆ ಒತ್ತಾಯಿಸಿದ್ದಾರೆ.

ಕೆಲಸ ಮುಗಿಸಿ ಮನೆಗೆ ಬಂದ ಪತಿಗೆ ವಿಷಯ ಗೊತ್ತಾಗಿದೆ. ಕೂಡಲೇ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ ಆಕೆಯ ಪ್ರಿಯಕರನೊಂದಿಗೆ ಮದುವೆ ಮಾಡಿಸಿದ್ದಾನೆ. ಅಂದ ಹಾಗೆ, ಪ್ರಿಯಕರನಿಗೆ ಈಗಾಗಲೇ ಮದುವೆಯಾಗಿ ಮೂವರು ಮಕ್ಕಳಿದ್ದಾರೆ. ಆತನ ವಿರುದ್ಧ ಯಾವುದೇ ದೂರು ದಾಖಲಾಗಿಲ್ಲ.

ಪ್ರಿಯಕರನೊಂದಿಗೆ ಪತ್ನಿಯ ಮದುವೆ ಮಾಡಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...