alex Certify ಐಡಾ ಚಂಡಮಾರುತ ಆರ್ಭಟ: ನ್ಯೂಯಾರ್ಕ್​ನಲ್ಲಿ ಪ್ರವಾಹದ ಅಬ್ಬರಕ್ಕೆ 41 ಮಂದಿ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಐಡಾ ಚಂಡಮಾರುತ ಆರ್ಭಟ: ನ್ಯೂಯಾರ್ಕ್​ನಲ್ಲಿ ಪ್ರವಾಹದ ಅಬ್ಬರಕ್ಕೆ 41 ಮಂದಿ ಬಲಿ

ಇಡಾ ಚಂಡಮಾರುತವು ಉಂಟು ಮಾಡಿದ ಪ್ರವಾಹ ಪರಿಸ್ಥಿತಿಯಲ್ಲಿ ನ್ಯೂಯಾರ್ಕ್​ನಲ್ಲಿ ರಾತ್ರೋರಾತ್ರಿ ಕನಿಷ್ಟ 41 ಮಂದಿಯನ್ನು ಬಲಿ ಪಡೆದಿದೆ.

ಹ್ಯುರಿಕೇನ್​ ಇಡಾ ಚಂಡಮಾರುತದ ಬಳಿಕ ನ್ಯೂಯಾರ್ಕ್​ನಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ನ್ಯೂಯಾರ್ಕ್​ನಲ್ಲಿ ದಾಖಲೆ ಪ್ರಮಾಣದಲ್ಲಿ ಮಳೆ ಸುರಿದಿದ್ದು, ಇದರಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಪರಿಸ್ಥಿತಿ ಹತೋಟಿಗೆ ಬಾರದ ಹಿನ್ನೆಲೆಯಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಿದೆ. ನ್ಯೂಯಾರ್ಕ್​ ನಗರದಲ್ಲಿ ರಸ್ತೆಗಳಲ್ಲಿ ನೀರು ತುಂಬಿ ಹರಿದಿತ್ತು ಕಟ್ಟಡಗಳು, ಎಲೆಕ್ಟ್ರಿಕ್​ ಕಂಬಗಳು ಸೇರಿದಂತೆ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಉಂಟಾಗಿದೆ.

ನ್ಯೂಯಾರ್ಕ್​ನ ಜನತೆ ಇತಿಹಾಸದಲ್ಲೇ ಕಂಡು ಕೇಳರಿಯದ ಪ್ರಮಾಣದಲ್ಲಿ ಪ್ರವಾಹಕ್ಕೆ ಸಾಕ್ಷಿಯಾಗಿದ್ದಾರೆ. ಪ್ರವಾಹ ಪರಿಸ್ಥಿತಿಯಿಂದಾಗಿ ನೆಲ ಮಾಳಿಗೆಗಳು ಸಂಪೂರ್ಣ ಜಲಾವೃತಗೊಂಡಿವೆ. ಪ್ರತ್ಯಕ್ಷದರ್ಶಿಯೊಬ್ಬರು ತಮ್ಮ ಅನುಭವ ಹಂಚಿಕೊಂಡಿದ್ದು, ನನಗೀಗ 50 ವರ್ಷ ವಯಸ್ಸಾಗಿದ್ದು ನನ್ನ ಜೀವಿತಾವಧಿಯೆಲ್ಲ ನಾನು ನ್ಯೂಯಾರ್ಕ್​ನಲ್ಲೇ ಕಳೆದಿದ್ದಾನೆ. ಇಷ್ಟೊಂದು ದಾಖಲೆ ಪ್ರಮಾಣ ಮಳೆಯನ್ನು ನಾನು ನೋಡಿಯೇ ಇರಲಿಲ್ಲ. ನಾನು ಕಾಡಿನಲ್ಲಿದ್ದೇನೆ ಎಂದು ನನಗೆ ಭಾಸವಾಗುತ್ತಿದೆ. ಈ ವರ್ಷ ಎಲ್ಲವೂ ವಿಚಿತ್ರ ಘಟನೆಗಳೇ ನಡೆಯುತ್ತಿದೆ ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಅಮೆರಿಕ ಅಧ್ಯಕ್ಷ ಜೋ ಬಿಡೆನ್​ ಜನತೆಗೆ ಧೈರ್ಯ ತುಂಬುವ ಕೆಲಸ ಮಾಡಿದ್ದು, ಈ ಪರಿಸ್ಥಿತಿಯಲ್ಲಿ ನಾವೂ ನಿಮ್ಮೊಂದಿಗಿದ್ದೇವೆ. ದೇಶ ನಿಮ್ಮ ಸಹಾಯಕ್ಕಿದೆ ಎಂದು ಹೇಳಿದ್ದಾರೆ.

ಪ್ರವಾಹದಿಂದಾಗಿ ನ್ಯೂಜೆರ್ಸಿ ಹಾಗೂ ನ್ಯೂಯಾರ್ಕ್​ನ ಮುಖ್ಯ ರಸ್ತೆಗಳು ಬಂದ್​ ಆಗಿವೆ. ಅಗ್ನಿಶಾಮಕದಳ ಸಿಬ್ಬಂದಿ ಪ್ರವಾಹದಲ್ಲಿ ಸಿಲುಕಿದವರ ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಸ್ಥಳೀಯ ಮಾಧ್ಯಮದ ಮಾಹಿತಿಯ ಪ್ರಕಾರ ನ್ಯೂಜೆರ್ಸಿಯಲ್ಲಿ ಕನಿಷ್ಟ 23 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಹೆಚ್ಚಿನ ಸಂಖ್ಯೆಯ ಜನರು ವಾಹನದೊಳಗೆ ಸಿಲುಕಿ ಸಾವನ್ನಪ್ಪಿದವರೇ ಇದ್ದಾರೆ ಎಂದು ಅಂದಾಜಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...