ನವದೆಹಲಿ: ಕಾಂಗ್ರೆಸ್ ನಾಯಕ ಮತ್ತು ಮಾಜಿ ರಕ್ಷಣಾ ಸಚಿವ ಎ.ಕೆ. ಆಂಟನಿ ಅವರ ಪುತ್ರ ಅನಿಲ್ ಬಿಜೆಪಿ ಸೇರಿದ್ದಾರೆ. ಬಿಜೆಪಿ ಸೇರಿದ ಪುತ್ರನ ನಿರ್ಧಾರ ತಪ್ಪು. ಅದರಿಂದ ನನಗೆ ನೋವಾಗಿದೆ ಎಂದು ಎ.ಕೆ. ಆಂಟನಿ ಹೇಳಿದ್ದಾರೆ.
ಅನಿಲ್ ಬಿಜೆಪಿ ಸೇರುವ ನಿರ್ಧಾರ ನನಗೆ ನೋವುಂಟು ಮಾಡಿದೆ. ಇದು ಅತ್ಯಂತ ತಪ್ಪು ನಿರ್ಧಾರ. ಭಾರತದ ತಳಹದಿ ಏಕತೆ ಮತ್ತು ಧಾರ್ಮಿಕ ಸಾಮರಸ್ಯ. ಆದರೆ, 2014 ರ ನಂತರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅವರು ವ್ಯವಸ್ಥಿತವಾಗಿ ವಿವಿಧತೆ ಮತ್ತು ಜಾತ್ಯತೀತತೆಯನ್ನು ದುರ್ಬಲಗೊಳಿಸುತ್ತಿದ್ದಾರೆ. ಬಿಜೆಪಿ ಏಕರೂಪತೆಯನ್ನು ಮಾತ್ರ ನಂಬುತ್ತದೆ. ದೇಶದ ಸಾಂವಿಧಾನಿಕ ಮೌಲ್ಯಗಳನ್ನು ನಾಶಪಡಿಸುತ್ತಿದೆ ಎಂದು ಆಂಟನಿ ಹೇಳಿದ್ದಾರೆ.
ಮೋದಿಯವರು 2014 ರಲ್ಲಿ ತಮ್ಮ ಮೊದಲ ಅಧಿಕಾರಾವಧಿಯಲ್ಲಿ ಅಧಿಕಾರ ವಹಿಸಿಕೊಂಡ ನಂತರ, ಜಾತ್ಯತೀತತೆ ಮತ್ತು ಬಹುತ್ವವನ್ನು ಕೇಂದ್ರೀಕರಿಸಿದ ಭಾರತೀಯ ಪ್ರಜಾಪ್ರಭುತ್ವದ ಮೂಲ ತತ್ವಗಳ ಮೇಲೆ ಪರಿಣಾಮ ಬೀರಿತು. ಮೋದಿ ಅವರು ತಮ್ಮ ಎರಡನೇ ಅವಧಿಯಲ್ಲಿ ಅಧಿಕಾರ ವಹಿಸಿಕೊಂಡ ನಂತರ ಇದು ವೇಗ ಪಡೆದುಕೊಂಡಿತು. ನಿರಂಕುಶಾಧಿಕಾರದ ಸುತ್ತ ಕೇಂದ್ರೀಕೃತವಾಗಿದೆ. ನನ್ನ ಕೊನೆಯ ಉಸಿರು ಇರುವವರೆಗೂ ನಾನು ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿರುದ್ಧ ಹೋರಾಡುತ್ತೇನೆ. ನಾನು ನೆಹರೂ ಕುಟುಂಬಕ್ಕೆ ಹತ್ತಿರವಾಗಿದ್ದೇನೆ ಎಂದು ಆಂಟನಿ ಹೇಳಿದ್ದಾರೆ.