ಯಾದಗಿರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಕಾರಣಕ್ಕೆ ಮಹಿಳೆಯೊಬ್ಬಳು ಪ್ರಿಯಕರನೊಂದಿಗೆ ಸೇರಿ ಪತಿ ಕೊಲೆ ಮಾಡಲು ಯತ್ನಿಸಿದ ಘಟನೆ ನಡೆದಿದೆ.
ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಹೂವಿನಹಳ್ಳಿ ಗ್ರಾಮದಲ್ಲಿ ನವೆಂಬರ್ 18 ರಂದು ತಡರಾತ್ರಿ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಪತಿ ವಿಶ್ವನಾಥರೆಡ್ಡಿಗೆ ನಿದ್ದೆ ಮಾತ್ರೆ ಕೊಟ್ಟ ಪತ್ನಿ ಪ್ರಿಯಕರನೊಂದಿಗೆ ಸೇರಿ ಕತ್ತು ಹಿಸುಕಿ ಕೊಲೆಗೆ ಯತ್ನಿಸಿದ್ದಾರೆ.
ಮೈದುನನೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದ ಮಹಿಳೆ ಇದನ್ನು ಮುಚ್ಚಿಹಾಕಲು ಗಂಡನಿಗೆ ನಿದ್ದೆ ಮಾತ್ರೆ ಕೊಟ್ಟಿದ್ದು, ಮಲಗಿದ ನಂತರ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ್ದಾರೆ. ಈ ವೇಳೆ ಎಚ್ಚರಗೊಂಡ ವಿಶ್ವನಾಥರೆಡ್ಡಿ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಥಳಿಸಿದ್ದಾನೆ. ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಶ್ವನಾಥರೆಡ್ಡಿಯ ಪತ್ನಿ ಮತ್ತು ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆನ್ನಲಾಗಿದೆ.