
ಮೈಸೂರು: ಮೈಸೂರಿನ ಆಲನಹಳ್ಳಿ ಬಡಾವಣೆಯಲ್ಲಿ ಪತ್ನಿಯನ್ನು ಕೊಲೆ ಮಾಡಿ ಮೃತದೇಹವನ್ನು ಸಂಪ್ ಗೆ ಎಸೆದಿದ್ದ ಪತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಸಮಣಿ(40) ಕೊಲೆಯಾದ ಮಹಿಳೆ. ಪತ್ನಿ ಕೊಲೆ ಮಾಡಿ ಪತಿ ಚೌಡಪ್ಪ ಶವವನ್ನು ಸಂಪ್ ಗೆ ಹಾಕಿದ್ದ. ಪತಿ ಚೌಡಪ್ಪ ಮತ್ತು ಅತ್ತೆ ಗೌರಮ್ಮ ಬಸಮಣಿಗೆ ನಿತ್ಯವೂ ಕಿರುಕುಳ ನೀಡುತ್ತಿದ್ದರು. ಇದೇ ವಿಚಾರವಾಗಿ ಪ್ರತಿದಿನ ಮನೆಯಲ್ಲಿ ಜಗಳ ನಡೆಯುತ್ತಿತ್ತು. ತಾಯಿ ಕಳೆದುಕೊಂಡು ಇಬ್ಬರು ಮಕ್ಕಳು ರೋಧಿಸುತ್ತಿದ್ದಾರೆ.
ಚೌಡಪ್ಪ ಮತ್ತು ಗೌರಮ್ಮ ಅವರನ್ನು ಪೊಲೀಸರು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ಸ್ಥಳಕ್ಕೆ ಕಾನೂನು ಸುವ್ಯವಸ್ಥೆ ಡಿಸಿಪಿ ಮುತ್ತುರಾಜ್ ಅವರು ಭೇಟಿ ನೀಡಿದ್ದಾರೆ. ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.