
ಆನೇಕಲ್: ಕೌಟುಂಬಿಕ ಕಲಹದಿಂದಾಗಿ ಪತ್ನಿಯನ್ನೇ ಕೊಲೆಗೈದ ಪತಿ ಮಹಾಶಯ ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ನಲ್ಲಿ ನಡೆದಿದೆ.
ಆನೇಕಲ್ ತಾಲೂಕಿನ ಜಿಗಣಿ ಟೌನ್ ನಲ್ಲಿ ಈ ಘಟನೆ ನಡೆದಿದೆ. 28 ವರ್ಷದ ಮುಬಾರಕ್ ಪತ್ನಿ 24 ವರ್ಷದ ಅರ್ಬಿಯಾ ತಾಜ್ ಎಂಬಾಕೆಯನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ.
ಕೃತ್ಯದ ಬಳಿಕ ಮನೆಯಲ್ಲಿ ಬಾಗಿಲು ಲಾಕ್ ಮಾಡಿಕೊಂಡು ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಪತ್ನಿಯ ತಾಯಿ ಘಟನೆ ಕಂಡು ಕೂಗಿಕೊಳ್ಳುತ್ತಿದ್ದಂತೆ ಸುತಮುತ್ತಲ ಜನರು ತಪ್ಪಿಸಿ ಮುಬಾರಕ್ ನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಜಿಗಣಿ ಪೊಲೀಸರು ಸ್ಥಳಕ್ಕೆ ಧಾವಸಿ ಪರಿಶೀಲನೆ ನಡೆಸಿದ್ದಾರೆ.