
ಬೆಂಗಳೂರು: ಪತ್ನಿಯನ್ನೇ ಕಟ್ಟಡದಿಂದ ಕೆಳಗೆ ತಳ್ಳಿ ಪತಿಯೇ ಹತ್ಯೆಗೈದಿರುವ ಘಟನೆ ಬೆಂಗಳೂರು ಜಿಲ್ಲೆಯ ಆನೇಕಲ್ ತಾಲೂಕಿನ ಚೌಡದೇನಹಳ್ಳಿಯಲ್ಲಿ ನಡೆದಿದೆ.
ಕ್ಷುಲ್ಲಕ ಕಾರಣಕ್ಕೆ ಪತಿ-ಪತ್ನಿ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಪತಿಯೇ ಪತ್ನಿಯನ್ನು ಕಟ್ಟಡದಿಂದ ಕೆಳಗೆ ಕೆಡವಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.
ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.