ಶಿವಮೊಗ್ಗ: ಸ್ಕ್ರೂ ಡ್ರೈವರ್ ನಿಂದ ಚುಚ್ಚಿ ಪತ್ನಿ ಕೊಲೆ ಮಾಡಿದ ಪತಿಗೆ ಜೀವಾವಧಿ ಶಿಕ್ಷೆ ಮತ್ತು 25,000 ರೂ. ದಂಡ ವಿಧಿಸಿ ಶಿವಮೊಗ್ಗದ ಒಂದನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಆದೇಶಿಸಿದೆ. ನ್ಯಾಯಾಧೀಶರಾದ ಮರುಳಸಿದ್ದ ಆರಾಧ್ಯ ಅವರು ತೀರ್ಪು ನೀಡಿದ್ದಾರೆ.
ಮಲ್ಲಿಕಾರ್ಜುನ ಬಡಾವಣೆ ನಿವಾಸಿ ಸೈಯದ್ ಫರ್ವೀಜ್ ಶಿಕ್ಷೆಗೊಳಗಾದ ವ್ಯಕ್ತಿ. ಪತ್ನಿಯ ಫಾತಿಮಾ ಖಾನ್ ಮೇಲೆ ಸಂಶಯ ಹೊಂದಿದ್ದ ಫರ್ವೀಜ್ 2020ರ ನವೆಂಬರ್ ನಲ್ಲಿ ಸ್ಕ್ರೂ ಡ್ರೈವರ್ ನಿಂದ ಚುಚ್ಚಿ ಕೊಲೆ ಮಾಡಿದ್ದ. ಈ ಬಗ್ಗೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಆರೋಪಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಪರ್ವೀಜ್ ಗೆ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿದ್ದಾರೆ. ಸರ್ಕಾರಿ ಅಭಿಯೋಜಕ ಬಿ.ಎಸ್. ಮಮತಾ ಅವರು ವಾದ ಮಂಡಿಸಿದ್ದರು.