ಹೈದರಾಬಾದ್: ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೋರೇಷನ್ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಲಾಗಿದ್ದು ಭರಪೂರ ಕೊಡುಗೆ ಘೋಷಿಸಲಾಗಿದೆ.
100 ಯೂನಿಟ್ ವರೆಗೆ ಉಚಿತ ವಿದ್ಯುತ್, ಉಚಿತವಾಗಿ ನೀರು ಪೂರೈಕೆ ಮಾಡುವುದಾಗಿ ಘೋಷಿಸಲಾಗಿದೆ. ಅಲ್ಲದೆ, ಮೆಟ್ರೋ ಮತ್ತು ನಗರ ಸಾರಿಗೆ ವಿಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವುದಾಗಿ ಭರವಸೆ ನೀಡಲಾಗಿದೆ.
ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತವಾಗಿ ಟ್ಯಾಬ್ಲೆಟ್ ನೀಡುವ ಘೋಷಣೆ ಮಾಡಿದೆ. ಇದರೊಂದಿಗೆ ಪ್ರವಾಹದಿಂದ ತೊಂದರೆಗೊಳಗಾದವರಿಗೆ 25 ಸಾವಿರ ರೂ. ಪರಿಹಾರ ಕೊಡುವ ಭರವಸೆ ನೀಡಲಾಗಿದೆ.
ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿಶನ್ ರೆಡ್ಡಿ, ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಕುಮಾರ್ ಮೊದಲಾದವರು ಇದ್ದರು. ಡಿಸೆಂಬರ್ 1 ರಂದು ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ ನಡೆಯಲಿದ್ದು, ಬಿಜೆಪಿ ಗೆಲುವಿಗೆ ಕಾರ್ಯತಂತ್ರ ರೂಪಿಸಿದೆ.