ಹೈದರಾಬಾದ್: ಹೈದರಾಬಾದ್ ನ ನಂದನವನಂ ಕಾಲೋನಿಯಲ್ಲಿರುವ 15 ವರ್ಷದ ಬಾಲಕಿಯ ಮನೆಗೆ ಭಾನುವಾರ ಬೆಳಗ್ಗೆ ನುಗ್ಗಿದ ಮೂವರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.
ಅಪ್ರಾಪ್ತ ಸಂತ್ರಸ್ತೆ ಸೋಮವಾರ ಪೊಲೀಸರಿಗೆ ದೂರು ನೀಡಿದ್ದು, ಮದ್ಯದ ಅಮಲಿನಲ್ಲಿ ಬೆಳಿಗ್ಗೆ 9:30 ರ ಸುಮಾರಿಗೆ ಸಂತ್ರಸ್ತೆಯ ಮನೆಗೆ ಬಲವಂತವಾಗಿ ನುಗ್ಗಿ ತನಗೆ ಮತ್ತು ಸಹೋದರನಿಗೆ ಚಾಕು ತೋರಿಸಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಆರೋಪಿ ಸಂತ್ರಸ್ತೆಯನ್ನು ಮೇಲಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ. ಬಾಲಕಿ ಸಹಾಯಕ್ಕಾಗಿ ಕೂಗಿಕೊಂಡಾಗ ಸ್ಥಳದಿಂದ ಪರಾರಿಯಾಗಿದ್ದಾರೆ.
ಪೊಲೀಸರು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(ಪೋಸ್ಕೋ) ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ 7 ಪೊಲೀಸ್ ತಂಡಗಳನ್ನು ರಚಿಸಲಾಗಿದೆ ಎಂದು ರಾಚಕೊಂಡ ಉಪ ಪೊಲೀಸ್ ಆಯುಕ್ತ ಬಿ. ಸಾಯಿಶ್ರೀ ತಿಳಿಸಿದ್ದಾರೆ. ಪೊಲೀಸರು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ತನಿಖೆ ನಡೆಯುತ್ತಿದೆ.