alex Certify ಪೊಲೀಸರ ಭರ್ಜರಿ ಬೇಟೆ: IPL ಬೆಟ್ಟಿಂಗ್ ಅಡ್ಡೆ ಮೇಲೆ ದಾಳಿ, ಬರೋಬ್ಬರಿ 23 ಬುಕ್ಕಿಗಳು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೊಲೀಸರ ಭರ್ಜರಿ ಬೇಟೆ: IPL ಬೆಟ್ಟಿಂಗ್ ಅಡ್ಡೆ ಮೇಲೆ ದಾಳಿ, ಬರೋಬ್ಬರಿ 23 ಬುಕ್ಕಿಗಳು ಅರೆಸ್ಟ್

ಹೈದರಾಬಾದ್: ಮಹತ್ವದ ಕಾರ್ಯಾಚರಣೆ ನಡೆಸಿರುವ ಸೈಬರಾಬಾದ್ ಪೊಲೀಸರು ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ದಾಳಿ ನಡೆಸಿದ್ದಾರೆ.

ದಾಳಿಯ ಸಂದರ್ಭದಲ್ಲಿ 23 ಬುಕ್ಕಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ 93 ಲಕ್ಷ ರೂಪಾಯಿ ನಗದು ಸೇರಿದಂತೆ 2.2 ಕೋಟಿ ರೂಪಾಯಿ ಮೌಲ್ಯದ ವಸ್ತು ಜಪ್ತಿ ಮಾಡಲಾಗಿದೆ.

ದುಬೈನಲ್ಲಿ ಐಪಿಎಲ್ ಟೂರ್ನಿ ನಡೆಯುತ್ತಿದ್ದು, ಇದೇ ಸಂದರ್ಭದಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಟ್ಟಿಂಗ್ ನಡೆಸಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ಕಲೆ ಹಾಕಿದ ಪೊಲೀಸರು ಕಾರ್ಯಾಚರಣೆ ನಡೆಸಿ 23 ಬುಕ್ಕಿಗಳನ್ನು ಬಂಧಿಸಿದ್ದಾರೆ.

ಹೈದರಾಬಾದ್ ನ ಬಾಚುಪಲ್ಲಿ, ಗಚ್ಚಿಬೌಲಿ, ಮೈಲಾರ ದೇವಪಲ್ಲಿ ಸೇರಿದಂತೆ ವವಿವಿಧ 7 ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ. ಹೈದರಾಬಾದ್ ನಲ್ಲಿ ಬಂಧಿಸಲಾದ ಅತಿದೊಡ್ಡ ಕ್ರಿಕೆಟ್ ಬೆಟ್ಟಿಂಗ್ ಗ್ಯಾಂಗ್ ಇದಾಗಿದ್ದು, ಬುಕ್ಕಿಗಳು ವಿವಿಧ ರಾಜ್ಯಗಳ ಬುಕ್ಕಿಗಳ ಸಂಪರ್ಕದೊಂದಿಗೆ ಬೆಟ್ಟಿಂಗ್ ನಡೆಸುತ್ತಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...