ಹೈದರಾಬಾದ್: ಎಂಬಿಬಿಎಸ್ ದ್ವಿತೀಯ ವರ್ಷದ ವಿದ್ಯಾರ್ಥಿಯೊಬ್ಬ ತನ್ನ ಖಾಸಗಿ ಅಂಗ ಕತ್ತರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದೀಕ್ಷಿತ್ ರೆಡ್ಡಿ(21) ಭಾನುವಾರ ರಾತ್ರಿ ಹೈದರಾಬಾದ್‌ನ ಹೊರವಲಯದಲ್ಲಿರುವ ಮೇಡ್ಚಲ್ ಮಲ್ಕಾಜ್ ಗಿರಿ ಜಿಲ್ಲೆಯ ಪಾಪಿರೆಡ್ಡಿ ನಗರದಲ್ಲಿನ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ರೆಡ್ಡಿ ಅವರ ಕುಟುಂಬದವರು ವಾಪಸ್ ಬಂದು ಪದೇ ಪದೇ ಬಾಗಿಲು ತಟ್ಟಿದರೂ ಯಾವುದೇ ಪ್ರತಿಕ್ರಿಯೆ ಬಾರದೆ ಇದ್ದ ಕಾರಣ ಮನೆಯವರು ಕಿಟಕಿ ತೆರೆದು ನೋಡಿದಾಗ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡು ಬಂದಿದೆ. ಕೂಡಲೇ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆಂಬ್ಯುಲೆನ್ಸ್‌ನೊಂದಿಗೆ ಧಾವಿಸಿದ ವೈದ್ಯಕೀಯ ಸಿಬ್ಬಂದಿ ಅವರು ಮೃತಪಟ್ಟಿರುವುದನ್ನು ಗಮನಿಸಿದ್ದಾರೆ.
ಯುವಕ ಚಾಕುವಿನಿಂದ ಖಾಗಿ ಅಂಗ ಕತ್ತರಿಸಿಕೊಂಡು ರಕ್ತಸ್ರಾವವಾಗಿ ಮೃತಪಟ್ಟಿದ್ದಾನೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳಾಂತರಿಸಲಾಯಿತು. ರೆಡ್ಡಿ ಸಿಕಂದರಾಬಾದ್‌ನ ಗಾಂಧಿ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ದ್ವಿತೀಯ ವರ್ಷದ ವಿದ್ಯಾರ್ಥಿಯಾಗಿದ್ದ. ವಾರಂಗಲ್ ಜಿಲ್ಲೆಯ ಹಳ್ಳಿಯೊಂದರ ಯುವಕನ ಪೋಷಕರು ಎರಡು ದಶಕಗಳ ಹಿಂದೆ ಹೈದರಾಬಾದ್‌ಗೆ ವಲಸೆ ಹೋಗಿದ್ದರು.
ರೆಡ್ಡಿಗೆ ಮಾನಸಿಕ ಸಮಸ್ಯೆಗಳಿದ್ದು, ಈ ಹಿಂದೆಯೂ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ. ಆರೋಗ್ಯ ಸಮಸ್ಯೆಯಿಂದ ಖಿನ್ನತೆಗೆ ಒಳಗಾಗಿದ್ದ ಎನ್ನಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.