ದಾವಣಗೆರೆ : ನಾನು ಆರೋಗ್ಯವಾಗಿದ್ದೇನೆ ಎಂದು ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಸ್ಪಷ್ಟನೆ ನೀಡಿದ್ದಾರೆ.
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಎಸ್.ಎಸ್. ಹೈಟೆಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ನಂತರ ಕೆಲ ಸಮಯ ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಂಡ ಅವರು ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದರು. ಹೃದಯ ಸಂಬಂಧಿ ತೊಂದರೆ, ಕಫ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರಿಗೆ ಉಸಿರಾಟ ಸಮಸ್ಯೆಯಾಗಿ ಎಸ್.ಎಸ್. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಶಾಮನೂರು ಶಿವಶಂಕರಪ್ಪ ಬೆಂಗಳೂರಿಗೆ ತೆರಳಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.
ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಅವರು ನಾನು ಆರೋಗ್ಯವಾಗಿದ್ದೇನೆ, ಕುಟುಂಬದ ಜೊತೆ ನಗು ನಗುತ್ತಾ ಇದ್ದೇನೆ ಎಂದು ಡಾ.ಶಾಮನೂರು ಶಿವಶಂಕರಪ್ಪ ಸ್ಪಷ್ಟನೆ ನೀಡಿದ್ದಾರೆ.