alex Certify ಉದ್ಘಾಟನೆ ಕಾರ್ಯಕ್ರಮದಲ್ಲೇ ಸಂಸದೆ ಸೀರೆಗೆ ಬೆಂಕಿ: ನಾನು ಸುರಕ್ಷಿತವಾಗಿದ್ದೀನಿ; ಸುಪ್ರಿಯಾ ಸುಳೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಘಾಟನೆ ಕಾರ್ಯಕ್ರಮದಲ್ಲೇ ಸಂಸದೆ ಸೀರೆಗೆ ಬೆಂಕಿ: ನಾನು ಸುರಕ್ಷಿತವಾಗಿದ್ದೀನಿ; ಸುಪ್ರಿಯಾ ಸುಳೆ ಮಾಹಿತಿ

ಪುಣೆ: ಪುಣೆಯ ಹಿಂಜೆವಾಡಿ ಪ್ರದೇಶದಲ್ಲಿ ಭಾನುವಾರ ನಡೆದ ಕರಾಟೆ ಸ್ಪರ್ಧೆಯ ಉದ್ಘಾಟನೆಯ ವೇಳೆ ಎನ್‌ಸಿಪಿ ಸಂಸದೆ ಸುಪ್ರಿಯಾ ಸುಳೆ ಅವರ ಸೀರೆಗೆ ಬೆಂಕಿ ಹೊತ್ತಿಕೊಂಡಿದೆ. ಬಾರಾಮತಿ ಸಂಸದರು ತಮ್ಮ ಕೈಗಳಿಂದ ಬೆಂಕಿಯನ್ನು ನಂದಿಸಿದ್ದಾರೆ.

ಕಾರ್ಯಕ್ರಮ ಉದ್ಘಾಟಿಸಲು ವೇದಿಕೆಯಲ್ಲಿ ಮೇಜಿನ ಮೇಲೆ ಇರಿಸಲಾಗಿದ್ದ ದೀಪದಿಂದ ಬೆಂಕಿ ತಗುಲಿದೆ. ಟೇಬಲ್ ಹತ್ತಿರ ಹೋಗುತ್ತಿದ್ದಂತೆ ಸೀರೆ ಕೆಳಗೆ ಇಟ್ಟಿದ್ದ ದೀಪಕ್ಕೆ ತಾಗಿ ಬೆಂಕಿ ಹೊತ್ತಿಕೊಂಡಿತು. ಕೂಡಲೇ ಸುಪ್ರಿಯಾ ಸುಳೆ ಬೆಂಕಿ ನಂದಿಸಿದ್ದಾರೆ.

ಹಿಂಜೆವಾಡಿ ಪ್ರದೇಶದಲ್ಲಿ ಆಯೋಜಿಸಿದ್ದ ಕರಾಟೆ ಸ್ಪರ್ಧೆಯ ಉದ್ಘಾಟನೆ ವೇಳೆ ನನ್ನ ಸೀರೆಗೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿತು. ಆದರೆ ಬೆಂಕಿಯನ್ನು ತ್ವರಿತವಾಗಿ ನಿಯಂತ್ರಿಸಲಾಯಿತು. ನನ್ನ ಬೆಂಬಲಿಗರು, ನಾಗರಿಕರು, ಪಕ್ಷದ ಪದಾಧಿಕಾರಿಗಳು ಮತ್ತು ಅಭಿಮಾನಿಗಳು ಆತಂಕಪಡಬೇಡಿ, ನಾನು ಸುರಕ್ಷಿತವಾಗಿದ್ದೇನೆ ಎಂದು ಅವರು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...