
ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನಾನು ಕೂಡ ಆಕಾಂಕ್ಷಿ ಎಂದು ಮಾಜಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
ಬೆಂಗಳೂರಿನ ಗೋವಿಂರಾಜನಗರದಲ್ಲಿ ನಿನ್ನೆ ನಡೆದ ಬೆಂಬಲಿಗರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ನಾನು ಬೆಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ, ಕಳೆದ 20 ವರ್ಷಗಳಿಂದ ಒಂದೇ ಸಮುದಾಯಕ್ಕೆ ಟಿಕೆಟ್ ನೀಡಲಾಗುತ್ತಿದೆ. ಈ ಬಾರಿ ಬೇರೆ ಸಮುದಾಯಕ್ಕೆ ಟಿಕೆಟ್ ಕೊಡಬೇಕು. ನಾನು ಕೂಡ ಟಿಕೆಟ್ ಆಕಾಂಕ್ಷಿ ಎಂದು ಹೇಳಿದ್ದಾರೆ.
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ವರುಣ ಹಾಗೂ ಚಾಮರಾಜನಗರದಲ್ಲಿ ಸ್ಪರ್ಧಿಸಿದ್ದ ವಿ.ಸೋಮಣ್ಣ ಅವರು ಎರಡೂ ಕ್ಷೇತ್ರಗಳಲ್ಲಿ ಸೋಲನುಭವಿಸಿದ್ದರು.