ಟೀಂ ಇಂಡಿಯಾ ಟೆಸ್ಟ್ ಕ್ರಿಕೆಟ್ ತಂಡದ ನಾಯಕತ್ವಕ್ಕೆ ವಿರಾಟ್ ಕೊಹ್ಲಿ ರಾಜೀನಾಮೆ ನೀಡಿರುವುದು ತಮಗೆ ಶಾಕ್ ನೀಡಿದೆ ಎಂದ ಭಾರತ ತಂಡದ ಮಾಜಿ ಕ್ರಿಕೆಟರ್ ಸುರೇಶ್ ರೈನಾ ತಿಳಿಸಿದ್ದಾರೆ.
“ವಿರಾಟ್ ಕೊಹ್ಲಿರ ದಿಢೀರ್ ನಿರ್ಧಾರದಿಂದ ನನಗೆ ಶಾಕ್ ಆಗಿದ್ದರೂ ಸಹ, ಅವರ ತೀರ್ಮಾನವನ್ನು ನಾನು ಗೌರವಿಸುತ್ತೇನೆ. ಆತ ಭಾರತ ಮತ್ತು ಜಾಗತಿಕ ಕ್ರಿಕೆಟ್‌ಗೆ ಕೊಟ್ಟಿರುವ ಕೊಡುಗೆಯನ್ನು ನಾನು ಶ್ಲಾಘಿಸಬಲ್ಲೆ ಅಷ್ಟೇ. ಭಾರತ ಕಂಡ ಅತ್ಯಂತ ಆಕ್ರಮಣಕಾರಿ ಮತ್ತು ಫಿಟ್ಟೆಸ್ಟ್ ಆಟಗಾರರಲ್ಲಿ ಒಬ್ಬರಾದ ಕೊಹ್ಲಿ ಆಟಗಾರರಾಗಿ ಮಿಂಚುವುದನ್ನು ಮುಂದುವರೆಸಲಿದ್ದಾರೆ ಎಂದು ನಂಬಿದ್ದೇನೆ,” ಎಂದು ರೈನಾ ಟ್ವೀಟ್ ಮಾಡಿದ್ದಾರೆ.
BIG NEWS: ನಂದಿನಿ ಹಾಲಿನ ದರ ಏರಿಕೆ ಬಗ್ಗೆ ಸಿಎಂ ಜೊತೆ ಚರ್ಚಿಸಿ ನಿರ್ಧಾರ
ಟೆಸ್ಟ್ ತಂಡದ ಪೂರ್ಣಾವಧಿ ನಾಯಕರಾಗಿ ವಿರಾಟ್ ಕೊಹ್ಲಿ ನಾಮಾಂಕಿತರಾದ ಮೊದಲ ಟೆಸ್ಟ್ ಪಂದ್ಯದಲ್ಲಿ ಸುರೇಶ್ ರೈನಾ ಆಡಿದ್ದರು. ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಆ ಪಂದ್ಯದಲ್ಲಿ ಸುರೇಶ್ ರೈನಾ ಶೂನ್ಯ ಸಂಪಾದನೆ ಮಾಡಿದ ಕಾರಣ ಮುಂದೆಂದೂ ಅವರು ಟೆಸ್ಟ್‌ನಲ್ಲಿ ಕಾಣಿಸಿಕೊಂಡಿರಲಿಲ್ಲ.
ಕ್ಯಾಪ್ಟನ್ ಕೂಲ್ ಮಹೇಂದ್ರ ಸಿಂಗ್ ಧೋನಿ ಗಾಯಗೊಂಡಿದ್ದ ಅಡಿಲೇಡ್‌ನಲ್ಲಿ ನಡೆದಿದ್ದ ಅದೇ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಕೊಹ್ಲಿ ನಾಯಕರಾಗಿ ಮೊದಲ ಬಾರಿಗೆ ತಂಡವನ್ನು ಮುನ್ನಡೆಸಿದ್ದರು. ಅದೇ ಸರಣಿಯ ಮೂರನೇ ಟೆಸ್ಟ್ ಪಂದ್ಯದ ಬಳಿಕ ಧೋನಿ ಟೆಸ್ಟ್ ಪಂದ್ಯಗಳಿಂದ ನಿವೃತ್ತರಾದ ಬೆನ್ನಿಗೆ ಕೊಹ್ಲಿ ಪೂರ್ಣಾವಧಿಗೆ ನಾಯಕರಾಗಿ ನೇಮಕಗೊಂಡಿದ್ದರು.