ಬೆಂಗಳೂರು : ಬಿಗ್ ಬಾಸ್ ಸ್ಪರ್ಧಿ ಗೋಲ್ಡ್ ಸುರೇಶ್ ಬಿಗ್ ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಗೋಲ್ಡ್ ಸುರೇಶ್ ಕುಟುಂಬದಲ್ಲಿ ತುರ್ತು ಪರಿಸ್ಥಿತಿ ಉಂಟಾಗಿದ್ದು, ಅವರ ಅವಶ್ಯಕತೆ ಬಿಗ್ ಬಾಸ್ ಮನೆಗಿಂತ ಕುಟುಂಬದವರಿಗೆ ಹೆಚ್ಚು ಅಗತ್ಯವಿದೆ. ಗೋಲ್ಡ್ ಸುರೇಶ್ ಹೆಚ್ಚು ತಡ ಮಾಡದೇ ನಿಮ್ಮ ವಸ್ತುಗಳನ್ನು ಪ್ಯಾಕ್ ಮಾಡಿಕೊಂಡು ಹೊರಗೆ ಬನ್ನಿ ಎಂದು ಬಿಗ್ ಬಾಸ್ ಆದೇಶಿಸಿತ್ತು.
ಈ ವಿಚಾರ ಹೊರಬರುತ್ತಿದ್ದಂತೆ ಗೋಲ್ಡ್ ಸುರೇಶ್ ತಂದೆ ನಿಧನರಾಗಿದ್ದಾರೆ ಎಂಬ ಸುಳ್ಳು ವದಂತಿ ಹಬ್ಬಿಸಲಾಗಿತ್ತು. ಈ ಬಗ್ಗೆ ಸುರೇಶ್ ತಂದೆ ಶಿವಗೌಡ ಪ್ರತಿಕ್ರಿಯೆ ನೀಡಿದ್ದಾರೆ.
ನನಗೆ ಯಾವುದೇ ಸಮಸ್ಯೆ ಇಲ್ಲ. ಆರೋಗ್ಯವಾಗಿದ್ದೇನೆ. ನನ್ನ ಕಾಲಿಗೆ ನೋವಾಗಿದೆ ಅಷ್ಟೇ,ನಾನಿನ್ನೂ ಜೀವಂತವಾಗಿದ್ದೇನೆ , ನನ್ನ ಸಾವಿನ ಬಗ್ಗೆ ವದಂತಿ ಹಬ್ಬಿದೆ ಎಂದು ಗೋಲ್ಡ್ ಸುರೇಶ್ ತಂದೆ ಸ್ಪಷ್ಟನೆ ನೀಡಿದ್ದಾರೆ. ಕುಟುಂಬಸ್ಥರು ಆರೋಗ್ಯವಾಗಿದ್ದಾರೆ. ಕಾಲಿಗೆ ಪೆಟ್ಟಾಗಿರುವ ಕಾರಣ ಮನೆಯಿಂದ ಹೊರಬಂದಿರಬಹುದು ಎಂದಿದ್ದಾರೆ. ಒಟ್ಟಿನಲ್ಲಿ ಗೋಲ್ಡ್ ಸುರೇಶ್ ಬಿಗ್ ಬಾಸ್ ಮನೆಯಿಂದ ಹೊರಬಂದಿದ್ದು ಅಚ್ಚರಿಗೆ ಕಾರಣವಾಗಿದೆ.