alex Certify ‘ಓದಿದ್ದಕ್ಕೆ ನಾನು ಸಿಎಂ ಆದೆ, ಇಲ್ಲದಿದ್ರೆ ಹಸು-ಎಮ್ಮೆ ಮೇಯಿಸಬೇಕಾಗಿತ್ತು’ ; ವಿದ್ಯಾರ್ಥಿಗಳಿಗೆ ಸಿದ್ದರಾಮಯ್ಯ ಕಿವಿಮಾತು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಓದಿದ್ದಕ್ಕೆ ನಾನು ಸಿಎಂ ಆದೆ, ಇಲ್ಲದಿದ್ರೆ ಹಸು-ಎಮ್ಮೆ ಮೇಯಿಸಬೇಕಾಗಿತ್ತು’ ; ವಿದ್ಯಾರ್ಥಿಗಳಿಗೆ ಸಿದ್ದರಾಮಯ್ಯ ಕಿವಿಮಾತು

ಬೆಂಗಳೂರು : ಓದಿದ್ದಕ್ಕೆ ನಾನು ಸಿಎಂ ಆದೆ, ಇಲ್ಲದಿದ್ರೆ ಹಸು, ಎಮ್ಮೆ ಮೇಯಿಸಬೇಕಾಗಿತ್ತು ಎಂದು ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು ಹೇಳಿದರು.

ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ವಿದ್ಯಾವಂತರಲ್ಲೇ ಜಾತಿಪ್ರಜ್ಞೆ ಹೆಚ್ಚಾಗುತ್ತಿದೆ. ಡಾಕ್ಟರ್ ಓದಿದವರು ಇನ್ನೂ ಮೌಡ್ಯ ಬಿಟ್ಟಿಲ್ಲ. ಓದಿದವರೇ ಇನ್ನೂ ಹಣೆಬರಹದಲ್ಲಿ, ಕರ್ಮ ಸಿದ್ಧಾಂತದಲ್ಲಿ ನಂಬಿಕೆ ಇಟ್ಟುಕೊಂಡಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳು ಬಾಲ್ಯದಿಂದಲೇ ಇಂಥಾ ಮೌಡ್ಯದಲ್ಲಿ ನಂಬಿಕೆ ಇಡಬಾರದು. ಸರ್ಕಾರಿ ವಸತಿ ಶಾಲೆಗಳ ಮಕ್ಕಳು ಈ ಬಾರಿ ಶೇ96 ರಷ್ಟು ಫಲಿತಾಂಶ ಪಡೆದಿದ್ದಾರೆ. ಮುಂದಿನ ಬಾರಿ ಶೇ100 ರಷ್ಟು ಅಂಕ ಪಡೆಯಬೇಕು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಪ್ರಯತ್ನಗಳು ಸಾಗಲಿ ಎಂದರು.

ಗ್ರಾಮೀಣ ಭಾಗದಲ್ಲಿ ಸರ್ವರಿಗೂ ಗುಣಮಟ್ಟದ ವೈಚಾರಿಕತೆ, ವೈಜ್ಞಾನಿಕತೆಯಿಂದ ಕೂಡಿದ ಶಿಕ್ಷಣ ದೊರೆಯಬೇಕು. ಎಲ್ಲಾ ಜಾತಿ, ವರ್ಗದ ಮಕ್ಕಳಿಗೆ ಓದುವ ಅವಕಾಶ ಕಲ್ಪಿಸಿದ್ದು ನಮ್ಮ ಸಂವಿಧಾನ. ಜಾತಿ ವ್ಯವಸ್ಥೆ ಕಾರಣದಿಂದ ಸಮಾಜದಲ್ಲಿ ಅಸಮಾನತೆ ಸೃಷ್ಟಿಯಾಗಿದೆ. ಇದನ್ನು ಹೋಗಲಾಡಿಸಬೇಕಾಗಿದೆ. ನನಗೆ ಶಿಕ್ಷಣ ಸಿಕ್ಕಿದ್ದರಿಂದಲೇ ಮುಖ್ಯಮಂತ್ರಿ ಆಗುವ ಅವಕಾಶ ದೊರೆಯಿತು. ಇಲ್ಲದಿದ್ದರೆ ನಾನೂ ಎಮ್ಮೆ, ಹಸು ಮೇಯಿಸುತ್ತಾ ಅಷ್ಟಕ್ಕೇ ಸೀಮಿತ ಆಗಬೇಕಾಗಿತ್ತು. ಬುದ್ದ, ಬಸವಣ್ಣ ಎಂಟು ಶತಮಾನಗಳ ಹಿಂದೆ ಜಾತಿ ವ್ಯವಸ್ಥೆ ಅಳಿಸಲು ಶ್ರಮಿಸಿದರು. ಆದರೆ ವಿದ್ಯಾವಂತರಲ್ಲೇ ಜಾತಿಪ್ರಜ್ಞೆ ಹೆಚ್ಚಾಗುತ್ತಿದೆ ಎಂಬುದು ವಿಪರ್ಯಾಸ. ಮಕ್ಕಳಿಗೆ ಜಾತಿ, ಧರ್ಮದ ತಾರತಮ್ಯ ಕಲಿಸುವವರೇ ನಾವು. ಆದ್ದರಿಂದ ಪೋಷಕರು, ಶಿಕ್ಷಕರು ಮೊದಲು ಕಂದಾಚಾರ, ಮೌಡ್ಯದಿಂದ ಹೊರಗೆ ಬರಬೇಕು. ಆಗ ಮಕ್ಕಳೂ ವೈಜ್ಞಾನಿಕವಾಗಿ ಬೆಳೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳುತ್ತಾರೆ ಎಂದರು.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...