ಬೆಂಗಳೂರು : ಸರ್ಕಾರದ ಕಾನೂನು ಬಾಹಿರ ಚಟುವಟಿಕೆ ವಿರುದ್ಧ ನಾನು ಬೊಮ್ಮಾಯಿ ಒಟ್ಟಾಗಿ ಹೋರಾಟ ಮಾಡುತ್ತೇವೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ಬಿಜೆಪಿಯೂ ವಿರೋಧ ಪಕ್ಷ, ಜೆಡಿಎಸ್ ಸಹ ವಿರೋಧ ಪಕ್ಷ. ಒಟ್ಟಾಗಿ ಕೆಲಸ ಮಾಡುವ ನಿರ್ಧಾರ ಆಗಿದೆ. ಎಲ್ಲರ ಅಭಿಪ್ರಾಯ ಪಡೆದು ಪಕ್ಷದ ಸಂಘಟನೆಗೆ 10 ಜನರ ತಂಡ ರಚನೆ ಮಾಡಲಾಗಿದೆ ಎಂದರು.
ಸರ್ಕಾರದ ಕಾನೂನುಬಾಹಿರ ಚಟುವಟಿಕೆಗಳ ವಿರುದ್ಧ ಧ್ವನಿ ಎತ್ತುವಂತೆ ದೇವಗೌಡರು ಸಂದೇಶ ನೀಡಿದ್ದಾರೆ. ದೇವೇಗೌಡರ ಮಾರ್ಗದರ್ಶನ, ಪಕ್ಷ ಸಂಘಟನೆ ಮೂಲಕ ಯುವಕರ ತಂಡ ರಚನೆ ಮಾಡಲಾಗುತ್ತದೆ. ಸರ್ಕಾರದ ಕಾನೂನು ಬಾಹಿರ ಚಟುವಟಿಕೆ ವಿರುದ್ಧ ನಾನು ಬೊಮ್ಮಾಯಿ ಒಟ್ಟಾಗಿ ಹೋರಾಟ ಮಾಡುತ್ತೇವೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಸದನದ ಕಲಾಪದ ಮೌಲ್ಯಗಳು ಕುಸಿಯುತ್ತಿವೆ. ಶಿಷ್ಟಾಚಾರದ ಹೆಸರಲ್ಲಿ ಅಧಿಕಾರಿಗಳ ದುರುಪಯೋಗ ಆಗಿದೆ, ಕಾಂಗ್ರೆಸ್ ಸರ್ಕಾರ ಅನ್ನದಾತರನ್ನ ಬೀದಿಗೆ ತಂದು ನಿಲ್ಲಿಸಿದೆ ಎಂದು ಹೇಳಿದ್ದಾರೆ.
ಜೆಡಿಎಸ್’ ಕೋಮುವಾದ ಸಿದ್ಧಾಂತಕ್ಕೆ ಬದಲಾಗುತ್ತಿದೆ, ಥೇಟ್ ನಾಗವಲ್ಲಿಯ ತರ : ಕಾಂಗ್ರೆಸ್ ವ್ಯಂಗ್ಯ
ಬೆಂಗಳೂರು : ಜೆಡಿಎಸ್ ಕೋಮುವಾದ ಸಿದ್ಧಾಂತಕ್ಕೆ ಬದಲಾಗುತ್ತಿದೆ ಎಂದು ಟ್ವಿಟರ್ ನಲ್ಲಿ ಕಾಂಗ್ರೆಸ್ ಲೇವಡಿ ಮಾಡಿದೆ.
ಬಿಜೆಪಿಗೆ ಮಾಜಿ ಸಿಎಂ ಕುಮಾರಸ್ವಾಮಿ ಸಾಥ್ ನೀಡಿರುವ ವಿಚಾರಕ್ಕೆ ಕಾಂಗ್ರೆಸ್ ಟ್ವೀಟ್ ನಲ್ಲಿ ವ್ಯಂಗ್ಯವಾಡಿದೆ. ಹೊಸ ರಾಜಕೀಯ ಸಮ್ಮಿಶ್ರಣವೊಂದು ತಯಾರಾಗುತ್ತಿದೆ. ಈಗ ನಮಗಿರುವ ಪ್ರಶ್ನೆ, ಜೆಡಿಎಸ್ ಕೋಮುವಾದವನ್ನು ಅಳವಡಿಸಿಕೊಳ್ಳುತ್ತದೆಯೇ ಅಥವಾ ಬಿಜೆಪಿ ಜಾತ್ಯತೀತತೆಯನ್ನು ಅಳವಡಿಸಿಕೊಳ್ಳುತ್ತದೆಯೇ? ಬೆಳವಣಿಗೆಗಳನ್ನು ನೋಡುತ್ತಿದ್ದರೆ ಜೆಡಿಎಸ್ ಕೋಮುವಾದ ಸಿದ್ಧಾಂತಕ್ಕೆ ಬದಲಾಗುತ್ತಿರುವುದು ಕಾಣುತ್ತಿದೆ, ಥೇಟ್. ನಾಗವಲ್ಲಿಯ ತರ!! ಎಂದು ಕಾಂಗ್ರೆಸ್ ಜೆಡಿಎಸ್ ಕಾಲೆಳೆದಿದೆ.