ನವದೆಹಲಿ: ಡಾ.ಬಿ.ಆರ್. ಅಂಬೇಡ್ಕರ್ ಕುರಿತ ಹೇಳಿಕೆ ವಿವಾದದ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಗೆ ಸಂವಿಧಾನದ ಮೇಲೆ ಗೌರವ ಇಲ್ಲ. ಕಾಂಗ್ರೆಸ್ ಸಂವಿಧಾನ ವಿರೋಧಿಯಾಗಿದೆ. ಅಂಬೇಡ್ಕರ್ ವಿರೋಧಿಯಾಗಿದೆ ಎಂದು ಟೀಕಿಸಿದ್ದಾರೆ.
ಅಂಬೇಡ್ಕರ್ ಸ್ಮಾರಕ ನಿರ್ಮಿಸಲು ಕಾಂಗ್ರೆಸ್ ನಿರಾಕರಿಸಿತ್ತು. ಅಂಬೇಡ್ಕರ್ ಮೇಲೆ ಕಾಂಗ್ರೆಸ್ ನವರಿಗೆ ಗೌರವ ಇರಲಿಲ್ಲ. ಅದಕ್ಕೆ ಇದೊಂದು ಉದಾಹರಣೆಯಾಗಿದೆ. ಸಾವರ್ಕರ್ ಅವರನ್ನು ಸಹ ಕಾಂಗ್ರೆಸ್ ಅವಮಾನಿಸಿದೆ. ಬಿಜೆಪಿ ಅಂಬೇಡ್ಕರ್ ಸಿದ್ಧಾಂತದಡಿ ಕೆಲಸ ಮಾಡುತ್ತಿದೆ. ನಾವು ಅಂಬೇಡ್ಕರ್ ಅವರನ್ನು ಅಪಮಾನಿಸುವ ಕೆಲಸ ಮಾಡಿಲ್ಲ. ಜೀವನಪರ್ಯಂತ ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ಅವಮಾನಿಸಿದೆ. ಅಂಬೇಡ್ಕರ್ ಅವರಿಗೆ ಭಾರತ ರತ್ನ ಸಿಗದಂತೆ ತಡೆದಿದೆ. ಕಾಂಗ್ರೆಸ್ ಅಂಬೇಡ್ಕರ್ ವಿರೋಧಿಯಾಗಿದೆ ಎಂದು ಆರೋಪಿಸಿದ್ದಾರೆ.
ರಾಜ್ಯಸಭೆಯಲ್ಲಿ ಸಂವಿಧಾನದ ಚರ್ಚೆಯ ವೇಳೆ ಮಾಡಿದ ಟೀಕೆಗಳ ಕುರಿತು ಪ್ರತಿಕ್ರಿಯಿಸಿದ ಅಮಿತ್ ಶಾ, ನನ್ನ ಹೇಳಿಕೆಗಳನ್ನು ತಪ್ಪಾಗಿ ನಿರೂಪಿಸಲಾಗಿದೆ, ಕಾಂಗ್ರೆಸ್ ಸುಳ್ಳು ಸುದ್ದಿಗಳನ್ನು ಹರಡುತ್ತದೆ, ನಾನು ಅಂಬೇಡ್ಕರ್ ವಿರುದ್ಧ ಮಾತನಾಡಲಾರೆ ಎಂದು ಹೇಳಿದ್ದಾರೆ.