ಅಹಮದಾಬಾದ್: ತಮ್ಮ ಹೆಸರಿನಲ್ಲಿ ಸ್ವಂತ ಮನೆಗೆ ಇಲ್ಲ. ಆದರೂ, ಕೇಂದ್ರ ಸರ್ಕಾರ ದೇಶದ ಲಕ್ಷಾಂತರ ಹೆಣ್ಣು ಮಕ್ಕಳ ಹೆಸರಲ್ಲಿ ಮನೆ ನಿರ್ಮಿಸಿಕೊಟ್ಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಗುಜರಾತ್ ನ ಚೋಟಾ ಉದಯಪುರ ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಬಡ ಜನರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಅರಿವಿದ್ದು, ದೇಶಾದ್ಯಂತ ಬಡವರಿಗಾಗಿ ಕೋಟ್ಯಂತರ ಮನೆಗಳನ್ನು ನಮ್ಮ ಸರ್ಕಾರ ನಿರ್ಮಿಸಿದೆ. ಮನೆಯ ಜೊತೆಗೆ ಗೌರವಯುತವಾಗಿ ಬದುಕುವ ಹಕ್ಕನ್ನು ನೀಡಿದ್ದೇವೆ ಎಂದು ಹೇಳಿದ್ದಾರೆ.
ಬುಡಕಟ್ಟು, ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಮಹಿಳೆಯರು ತಮ್ಮ ಹೆಸರಿನಲ್ಲಿ ಸ್ವಂತ ಮನೆ ಹೊಂದಿದ್ದಾರೆ. ನಾನು ಬಡವರೊಂದಿಗೆ ಸಮಯ ಕಳೆದಂತೆ ಅವರ ಸಮಸ್ಯೆಗಳನ್ನು ಅರಿತು ಪರಿಹರಿಸಲು ಪ್ರಯತ್ನಿಸಿದೆ. ನಮ್ಮ ಸರ್ಕಾರ 4 ಕೋಟಿ ಮನೆಗಳನ್ನು ನಿರ್ಮಿಸಿರುವುದು ಸಂತಸ ತಂದಿದೆ ಎಂದು ಹೇಳಿದ್ದಾರೆ.