ಬೆಂಗಳೂರು : ಮಾಜಿ ಸಿಎಂ ಕುಮಾರಸ್ವಾಮಿ ಪೆನ್ ಡ್ರೈವ್ ಬಾಂಬ್ ಸಿಡಿಸಿದ ಬೆನ್ನಲ್ಲೇ ಮಾಜಿ ಡಿಸಿಎಂ, ಶಾಸಕ ಲಕ್ಷ್ಮಣ್ ಸವದಿ ( Lakshman Savadi ) ಕೂಡ ಹೊಸ ಬಾಂಬ್ ಸಿಡಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಲಕ್ಷ್ಮಣ್ ಸವದಿ ನನ್ ಹತ್ರನೂ ಪೆನ್ ಡ್ರೈವ್ ಇದೆ, ಸಮಯ ಬಂದಾಗ ಬಿಡುಗಡೆ ಮಾಡ್ತೀನಿ ಎಂದು ಹೇಳಿದ್ದಾರೆ. ಅದು ಯಾರದ್ದು ಅಂತ ಆಗಲೇ ಗೊತ್ತಾಗಲಿದೆ ಎಂದರು.
ಕುಮಾರಸ್ವಾಮಿ ಅವರು ಪೆನ್ ಡ್ರೈವ್ ಬಗ್ಗೆ ಮಾತನಾಡುವುದನ್ನು ನಾನು ನೋಡಿದ್ದೇನೆ. ತುಂಬಾ ಜನರ ಕಡೆ ಪೆನ್ಡ್ರೈವ್ ಇದ್ದಾವೆ. ನನ್ನ ಹತ್ತಿರ ಒಂದು ಪೆನ್ಡ್ರೈವ್ ಇದೆ, ಸಮಯ ಬಂದಾಗ ಅದನ್ನು ಬಿಡುಗಡೆ ಮಾಡುತ್ತೇನೆ ಎಂದರು. ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ನಡೆದಿಲ್ಲ, ಹೆಚ್ಡಿಕೆ ಸುಖಾ ಸುಮ್ಮನೆ ಹಾಗೆ ಆರೋಪ ಮಾಡುತ್ತಿದ್ದಾರೆ ಎಂದರು.