ಬೆಂಗಳೂರು : ಅಕ್ರಮ ವಿದ್ಯುತ್ ಕಳವು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಕುಮಾರಸ್ವಾಮಿ ಸುದ್ದಿಗೋಷ್ಟಿ ನಡೆಸಿ ದಂಡದ ಬಗ್ಗೆ ಮಾಹಿತಿ ನೀಡಿದ್ದಾರೆ.
ಬೆಸ್ಕಾಂ ನನಗೆ 2,526 ರೂ. ಬಿಲ್ ಬದಲು 68,526 ರೂಪಾಯಿ ಬಿಲ್ ನೀಡಿದ್ದಾರೆ. ಬೆಸ್ಕಾಂ ಇಲಾಖೆ ಅಧಿಕಾರಿಗಳು 68,526 ರೂಪಾಯಿ ದಂಡ ವಿಧಿಸಿದ್ದಾರೆ. ಹಣ ಕಟ್ಟಲು ನಾನು ಸಿದ್ಧನಿದ್ದೇನೆ. ಆದರೆ ಬೆಸ್ಕಾಂ 2.5 ಕಿಲೋ ವ್ಯಾಟ್ಗೆ ಲೆಕ್ಕ ತೆಗೆದುಕೊಂಡಿದೆ. 7 ದಿನಕ್ಕೆ 71 ಯೂನಿಟ್ ಆಗಲಿದೆ ಅಂತ ಕೊಟ್ಟಿದ್ದಾರೆ ಎಂದು ಕಿಡಿಕಾರಿದರು.
ಬೆಸ್ಕಾಂ ಇಲಾಖೆ ಪ್ರಕಾರ 2,526 ರೂಪಾಯಿ ಬಿಲ್ ನೀಡಬೇಕಿತ್ತು. ಆದರೆ ಬೆಸ್ಕಾಂ ಇಲಾಖೆ 68,526 ರೂ. ಕರೆಂಟ್ ಬಿಲ್ ನೀಡಿದೆ. 71 ಯೂನಿಟ್ಗೆ ಮೂರು ಪಟ್ಟು ದಂಡ ಹಾಕಿದ್ದಾರೆ. ಆದರೆ ಕರೆಂಟ್ ಬಿಲ್ ಬಗ್ಗೆ ಪುನರ್ ಪರಿಶೀಲನೆ ಮಾಡಲು ಹೇಳಿದ್ದೇನೆ. ನೀವು ನೀಡಿದ ಬಿಲ್ ಕೂಡ ಸರಿ ಇಲ್ಲ ಅಂತ ಪ್ರತಿಭಟನೆ ಮಾಡಿದ್ದೇನೆ ಎಂದು ಬೆಸ್ಕಾಂ ವಿರುದ್ಧ ಮಾಜಿ ಸಿಎಂ H.D ಕುಮಾರಸ್ವಾಮಿ ಕಿಡಿಕಾರಿದರು.