ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಇನ್ನು ಎರಡು ದಿನಗಳು ಮಾತ್ರ ಬಾಕಿ ಉಳಿದಿವೆ. ಇದಕ್ಕಾಗಿ ಸಿದ್ಧತೆಗಳು ಭರದಿಂದ ಸಾಗಿವೆ.
ಸಂತರ ಜೊತೆಗೆ, ದೇಶದಾದ್ಯಂತದ ಅನೇಕ ಗಣ್ಯರು ಈ ಕಾರ್ಯಕ್ರಮದಲ್ಲಿ ಸೇರುತ್ತಿದ್ದಾರೆ. ಆದರೆ, ಕಾಂಗ್ರೆಸ್ ಇಲ್ಲಿಗೆ ಹೋಗಲು ನಿರಾಕರಿಸಿದ್ದು, ಇದು ಬಿಜೆಪಿಯ ರಾಜಕೀಯ ಕಾರ್ಯಕ್ರಮ ಎಂದು ಹೇಳಿದೆ.
ಭಾರತದ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಅವರನ್ನು ಈ ಬಗ್ಗೆ ಪ್ರಶ್ನಿಸಿದಾಗ ಅವರು ‘ಹೋಗಲು ಇಷ್ಟವಿಲ್ಲದಿರುವವರು ಹೋಗುವುದಿಲ್ಲ, ನಾನು ಹೋಗುತ್ತೇನೆ ಎಂದು ಸ್ಪಷ್ಟವಾಗಿ ಹೇಳಿದರು.
ಹರ್ಭಜನ್ ಸಿಂಗ್ ಆಮ್ ಆದ್ಮಿ ಪಕ್ಷದಿಂದ ರಾಜ್ಯಸಭಾ ಸಂಸದರಾಗಿದ್ದಾರೆ. ರಾಮ ಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಹೋಗಬೇಕೇ ಅಥವಾ ಬೇಡವೇ ಎಂಬ ವಿವಿಧ ರಾಜಕೀಯ ಪಕ್ಷಗಳ ನಿರ್ಧಾರಗಳಿಗೆ ಸಂಬಂಧಿಸಿದಂತೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಯಾರು ಏನು ಹೇಳುತ್ತಾರೆ ಎಂಬುದು ಬೇರೆ ವಿಷಯ. ನಮ್ಮ ಕಾಲದಲ್ಲಿ ರಾಮಮಂದಿರ ನಿರ್ಮಿಸಿ ಉದ್ಘಾಟನೆಯಾಗುತ್ತಿರುವುದು ನಮ್ಮ ಅದೃಷ್ಟ, ನಾವು ಅಲ್ಲಿಗೆ ಹೋಗಬೇಕು. ಆಶೀರ್ವಾದ ಪಡೆಯಬೇಕು. ನನಗೆ ದೇವರ ಮೇಲೆ ನಂಬಿಕೆ ಇದೆ, ನಾನು ಹೋಗುತ್ತೇನೆ ಎಂದಿದ್ದಾರೆ.