alex Certify BREAKING : ಪಟಾಕಿ ಗೋಡೌನ್ ಮಾಲೀಕನ ಮೇಲೆ ಕ್ರಮಕ್ಕೆ ಸೂಚಿಸಿದ್ದೇನೆ : ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಪಟಾಕಿ ಗೋಡೌನ್ ಮಾಲೀಕನ ಮೇಲೆ ಕ್ರಮಕ್ಕೆ ಸೂಚಿಸಿದ್ದೇನೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಪಟಾಕಿ ಗೋದಾಮಿನ ಮಾಲೀಕನ ಮೇಲೆ ಕ್ರಮಕ್ಕೆ ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಅನೇಕಲ್ ನ ಅತ್ತಿಬೆಲೆ ಪಟಾಕಿ ಅಂಗಡಿಯಲ್ಲಿ ಅಗ್ನಿ ದುರಂತ ಸಂಭವಿಸಿ 14 ಜನರು ಸಾವನ್ನಪ್ಪಿದ್ದು, ಘಟನೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಘಟನೆ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ ಗೋದಾಮು ಮಾಲೀಕನ ಮೇಲೆ ಕ್ರಮ ತೆಗೆದುಕೊಳ್ಳಲು ಸೂಚಿಸಿದ್ದನೆ. ಘಟನೆ ನಡೆದ ಸ್ಥಳಕ್ಕೆ ನಾನು ಹೋಗುತ್ತಿದ್ದೇನೆ, ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳುತ್ತೇನೆ ಎಂದರು.  ಲೈಸೆನ್ಸ್ ಪಡೆದು ದಾಸ್ತಾನು ಮಾಡಿದ್ದಾರಾ..? ಇಲ್ಲವೇ ಹಾಗೆ ಮಾಡಿದ್ದಾರೆಯೇ ಎಂಬುದನ್ನು ಪರಿಶೀಲನೆ ನಡೆಸಲಾಗುತ್ತಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...