
ಚಾಮರಾಜನಗರ: ನಟ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಮೇಲಿನ ಅಭಿಮಾನದಿಂದ ವಿದ್ಯಾರ್ಥಿನಿ ಕೈ ಕೊಯ್ದುಕೊಂಡ ರಕ್ತದಲ್ಲಿ ಐ ಲವ್ ಯು ಅಪ್ಪು ಎಂದು ಬರೆದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಚಾಮರಾಜನಗರದ ನಿವಾಸಿಯಾಗಿರುವ ವಿದ್ಯಾರ್ಥಿನಿ ಮೈಸೂರಿನ ಹಾಸ್ಟೆಲ್ನಲ್ಲಿ ವಾಸವಾಗಿದ್ದಾಳೆ. ಪದವಿ ಓದುತ್ತಿರುವ ವಿದ್ಯಾರ್ಥಿನಿ ಪುನೀತ್ ರಾಜಕುಮಾರ್ ನಿಧನದಿಂದ ಆಘಾತಕ್ಕೆ ಒಳಗಾಗಿದ್ದಾಳೆ. ಬ್ಲೇಡ್ ನಿಂದ ಕೈ ಕೊಯ್ದುಕೊಂಡು ರಕ್ತದಲ್ಲಿ ಬಿಳಿಹಾಳೆಯಲ್ಲಿ ಐ ಲವ್ ಯು ಅಪ್ಪು ಎಂದು ಬರೆದಿದ್ದಾಳೆ. ಅಸ್ವಸ್ಥ ವಿದ್ಯಾರ್ಥಿನಿಯನ್ನು ಸಹಪಾಠಿಗಳು ಆಸ್ಪತ್ರೆಗೆ ದಾಖಲಿಸಿದ್ದು, ಪೋಷಕರು ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ. ಆಕೆಯೀಗ ಚೇತರಿಸಿಕೊಂಡಿದ್ದಾಳೆ ಎನ್ನಲಾಗಿದೆ.