alex Certify 2025 ರ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡ್ತಾರಂತೆ ಕೇಜ್ರಿವಾಲ್….! ಅದಕ್ಕಿದೆ ಒಂದು ‘ಷರತ್ತು’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

2025 ರ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡ್ತಾರಂತೆ ಕೇಜ್ರಿವಾಲ್….! ಅದಕ್ಕಿದೆ ಒಂದು ‘ಷರತ್ತು’

ಅಬಕಾರಿ ಹಗರಣದಲ್ಲಿ ಸಿಲುಕಿ ಜೈಲು ಪಾಲಾಗಿದ್ದ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಇದೀಗ ಜಾಮೀನಿನ ಮೇಲೆ ಹೊರ ಬಂದಿದ್ದಾರೆ. ಜೈಲಿನಿಂದ ಬಿಡುಗಡೆಗೊಂಡ ಬಳಿಕ ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅವರು ರಾಜೀನಾಮೆ ನೀಡಿದ್ದು, ಆತಿಷಿ ನೂತನ ಮುಖ್ಯಮಂತ್ರಿಯಾಗಿದ್ದಾರೆ.

2025ರ ಫೆಬ್ರವರಿಯಲ್ಲಿ ದೆಹಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಇದಕ್ಕಾಗಿ ಈಗಾಗಲೇ ಸಿದ್ಧತೆ ಆರಂಭಿಸಿರುವ ಅರವಿಂದ್ ಕೇಜ್ರಿವಾಲ್ ‘ಜನತಾ ಕಿ ಅದಾಲತ್’ ನಡೆಸುತ್ತಿದ್ದಾರೆ. ಭಾನುವಾರದಂದು ದೆಹಲಿಯ ಚತ್ತರ್ಸಾಲ್ ಕ್ರೀಡಾಂಗಣದಲ್ಲಿ ಎರಡನೇ ‘ಜನತಾ ಕಿ ಅದಾಲತ್’ನಡೆದಿದ್ದು, ಈ ಸಂದರ್ಭದಲ್ಲಿ ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಪರ ಪ್ರಚಾರ ನಡೆಸುವುದಾಗಿ ಹೇಳಿ ಅವರು ಅಚ್ಚರಿ ಮೂಡಿಸಿದ್ದಾರೆ.

ಆದರೆ ಅರವಿಂದ್ ಕೇಜ್ರಿವಾಲ್ ಇದಕ್ಕೆ ಷರತ್ತು ಒಂದನ್ನು ವಿಧಿಸಿದ್ದು, ಮುಂಬರುವ ದೆಹಲಿ ವಿಧಾನಸಭಾ ಚುನಾವಣೆ ನಡೆಯುವ ಮುನ್ನ ಬಿಜೆಪಿ ಮತ್ತದರ ಮಿತ್ರ ಪಕ್ಷಗಳು ಆಡಳಿತ ನಡೆಸುತ್ತಿರುವ 22 ರಾಜ್ಯಗಳಲ್ಲಿ ಸಾರ್ವಜನಿಕರಿಗೆ ಉಚಿತ ವಿದ್ಯುತ್ ನೀಡುವ ಘೋಷಣೆಯನ್ನು ಮಾಡಿದರೆ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ನಡೆಸುವುದಾಗಿ ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ದೆಹಲಿಯಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿರುವ ಕುರಿತು ಕಟು ಟೀಕೆ ಮಾಡಿರುವ ಅರವಿಂದ್ ಕೇಜ್ರಿವಾಲ್, ಪ್ರಸ್ತುತ ರಾಷ್ಟ್ರ ರಾಜಧಾನಿಯಲ್ಲಿ 90ರ ದಶಕದಲ್ಲಿ ಮುಂಬೈನಲ್ಲಿ ಇದ್ದಂತ ಪರಿಸ್ಥಿತಿ ಇದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...