alex Certify ‘ಮಹಿಳೆಯರು ನೆಮ್ಮದಿಯಾಗಿದ್ರೆ ದೇಶ ಸಮೃದ್ಧಿಯಾಗುತ್ತದೆ ಎಂದು ನೆಹರು ಹೇಳಿದ್ದರು’ : ಡಿಸಿಎಂ ಡಿಕೆ ಶಿವಕುಮಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಮಹಿಳೆಯರು ನೆಮ್ಮದಿಯಾಗಿದ್ರೆ ದೇಶ ಸಮೃದ್ಧಿಯಾಗುತ್ತದೆ ಎಂದು ನೆಹರು ಹೇಳಿದ್ದರು’ : ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು : ಮಹಿಳೆಯರು ನೆಮ್ಮದಿಯಾಗಿದ್ರೆ ದೇಶ ಸಮೃದ್ಧಿಯಾಗುತ್ತದೆ ಎಂದು ನೆಹರು ಹೇಳಿದ್ದರು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

ಬೆಂಗಳೂರಿನ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ನಡೆದ ಸ್ವತಂತ್ರ ಭಾರತದ ಮೊದಲ ಪ್ರಧಾನಿ ಪಂಡಿತ್ ಶ್ರೀ ಜವಾಹರಲಾಲ್ ನೆಹರು ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳೊಂದಿಗೆ ಪಾಲ್ಗೊಂಡು ನೆಹರು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಮಾತನಾಡಿದರು.

ನೆಹರು ಅವರು ಅವರು ಹಾಕಿಕೊಟ್ಟ ಭದ್ರ ಅಡಿಪಾಯದ ಮೇಲೆ ನಾವು ಇಂದು ಬದುಕಿದ್ದೇವೆ. ಬಿಜೆಪಿಯವರು ಎಷ್ಟೇ ಪ್ರಯತ್ನಪಟ್ಟರೂ ನೆಹರು ಅವರ ಸಾಧನೆ ಹಾಗೂ ಕೊಡುಗೆಗಳನ್ನು ಜನರ ಮನಸ್ಸಿನಿಂದ ತೆಗೆದುಹಾಕಲು ಸಾಧ್ಯವಿಲ್ಲ. ಸ್ವಾತಂತ್ರ್ಯ ಹೋರಾಟಗಾರರಾಗಿ, ಉತ್ತಮ ಆಡಳಿತಗಾರರಾಗಿ ಸೇವೆಸಲ್ಲಿಸಿದ ನೆಹರು ಅವರು ಹಲವಾರು ಸರ್ಕಾರಿ ಸಂಸ್ಥೆಗಳನ್ನು ಸ್ಥಾಪಿಸಿ ಉದ್ಯೋಗವಕಾಶಗಳನ್ನು ಸೃಷ್ಟಿಸಿದರು. ಮಹಿಳೆಯರು ನೆಮ್ಮದಿಯಾಗಿದ್ದರೆ ದೇಶ ಸಮೃದ್ಧಿಯಾಗುತ್ತಿದೆ ಎಂದು ಅವರು ಹೇಳುತ್ತಿದ್ದರು. ಆ ನಿಟ್ಟಿನಲ್ಲಿ ನಾವು 5 ಗ್ಯಾರಂಟಿಗಳನ್ನು ಜಾರಿಗೆ ತಂದು ಮಹಿಳೆಯರು ನೆಮ್ಮದಿಯಾಗಿ ಬದುಕುವಂತೆ ಮಾಡಿದ್ದೇವೆ ಎಂದು ಹೇಳಿದರು,

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...