alex Certify BIG NEWS : ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ, ಡೌಟೇ ಬೇಡ : CM ಸಿದ್ದರಾಮಯ್ಯ ಸ್ಪಷ್ಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ, ಡೌಟೇ ಬೇಡ : CM ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ, ಡೌಟೇ ಬೇಡ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಅರಣ್ಯ ಭವನದ ಬಳಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು . ಮುಖ್ಯಮಂತ್ರಿ ಸ್ಥಾನ ಖಾಲಿಯಿಲ್ಲದಿರುವಾಗ ಮುಂದೆ ಯಾರು ಮುಖ್ಯಮಂತ್ರಿ? ಎನ್ನುವ ಪ್ರಶ್ನೆಯೇ ಉದ್ಭವಿಸುವುದಿಲ್ಲ.

ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಎಲ್ಲರೂ ಹೇಳುತ್ತಿದ್ದಾರೆ. ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದರಲ್ಲಿ ಯಾವುದೇ ಸಂಶಯವಿಲ್ಲ. ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸುಮಾರು 21 ಹಗರಣಗಳು ನಡೆದಿದ್ದು, ಈ ಎಲ್ಲ ಹಗರಣಗಳ ತನಿಖೆಗೆ ತ್ವರಿತವಾಗಿ ಚಾಲನೆ ನೀಡಲು ಹಾಗೂ ಈ ಬಗ್ಗೆ ತೆಗೆದುಕೊಳ್ಳಬೇಕಾದ ಮುಂದಿನ ಕ್ರಮಗಳ ಬಗ್ಗೆ ಸಲಹೆ ನೀಡಲು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಸಚಿವಸಂಪುಟದ ಉಪ ಸಮಿತಿ ರಚಿಸಲಾಗಿದೆ. ಈ ಸಮಿತಿಯಲ್ಲಿ ಸಚಿವರಾದ ಕೃಷ್ಣಭೈರೇಗೌಡ, ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್ ಹಾಗೂ ಎಚ್.ಕೆ.ಪಾಟೀಲ್ ರವರು ಸದಸ್ಯರಾಗಿದ್ದಾರೆ. ಈ ಸಮಿತಿಗೆ ವರದಿಯನ್ನು ನೀಡಲು ಒಂದರಿಂದ ಎರಡು ತಿಂಗಳ ಅವಧಿಯನ್ನು ನೀಡಲಾಗಿದೆ. ಪಿಎಸ್ಐ ಹಗರಣ, 40% ಕಮಿಷನ್ ಹಗರಣ, ಕೋವಿಡ್ 19, ಬಿಟ್ ಕಾಯಿನ್ ಹಗರಣಗಳಿಗೆ ಮಾತ್ರ ತನಿಖಾ ಆಯೋಗಗಳನ್ನು ರಚಿಸಲಾಗಿದೆ. ಅದರಲ್ಲಿ ಕೋವಿಡ್- 19 ಬಗ್ಗೆ ತನಿಖಾ ಆಯೋಗ ಪೂರ್ವಭಾವಿ ವರದಿಯನ್ನು ನೀಡಿದ್ದು, ಅಧಿಕಾರಿಗಳ ಪರಿಶೀಲನೆಯ ನಂತರ ಈ ಬಗ್ಗೆ ಸಚಿವ ಸಂಪುಟದಲ್ಲಿ ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು. ಬಿಜೆಪಿಯವರು ನನ್ನ ಮೇಲೆ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ನಾವು ದ್ವೇಷದ ರಾಜಕಾರಣ ಮಾಡುವುದಿಲ್ಲ. ಆದರೆ ತಪ್ಪು ಮಾಡಿದವರ ಮೇಲೆ ಖಂಡಿತ ಕ್ರಮ ಕೈಗೊಳ್ಳಲಾಗುವುದು. ಪಿಎಸ್ ಐ ಹಗರಣದ ತನಿಖೆಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಬಿ.ವೀರಪ್ಪ ಅವರ ಆಯೋಗವು ವರದಿಯನ್ನು ನೀಡಿದ್ದು, ಈ ಹಗರಣದ ಬಗ್ಗೆ ವಿಶೇಷ ತನಿಖಾ ತಂಡಕ್ಕೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ಹಾಗೂ ಕೇಂದ್ರ ಜಾರಿ ನಿರ್ದೇಶನಾಲಯದ ತನಿಖೆ ಮಾಡಿ ಚಾರ್ಜ್ ಶೀಟ್ ಸಲ್ಲಿಸಿದ್ದು, ಈ ಬಗ್ಗೆ ನ್ಯಾಯಾಲಯ ತೀರ್ಮಾನ ಕೈಗೊಳ್ಳಲಿದೆ ಎಂದರು.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...