ಬೆಂಗಳೂರು : ನಾನು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಕುರಿತು ಸುದ್ದಿಗಾರರ ಪ್ರಶ್ನೆಗೆ ಬೆಂಗಳೂರಲ್ಲಿ ಪ್ರತಿಕ್ರಿಯೆ ನೀಡಿದ ಅವರು ನಾನು ಲೋಕಸಭೆ ಟಿಕೆಟ್ ಆಕಾಂಕ್ಷಿ ಅಲ್ಲ, ನನ್ನ ಅಭಿಪ್ರಾಯ ಈಗಾಗಲೇ ಸ್ಪಷ್ಟಪಡಿಸಿದ್ದೇನೆ, ನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಯಾರು ಸ್ಪರ್ಧೆ ಮಾಡಬೇಕು ಎಂಬುದು ಗುರುವಾರ ಮಂಡ್ಯದಲ್ಲಿ ನಡೆಯಲಿರುವ ಜೆಡಿಎಸ್ ಸಭೆಯಲ್ಲಿ ಚರ್ಚೆಯಾಗಲಿದೆ. ದೇವೇಗೌಡರು, ಕುಮಾರಸ್ವಾಮಿ ಹಾಗೂ ನಮ್ಮ ಮಂಡ್ಯ ನಾಯಕರು ಅಭ್ಯರ್ಥಿಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಲೋಕಸಭಾ ಚುನಾವಣೆಗೆ ಹೆಚ್.ಡಿ ಕುಮಾರಸ್ವಾಮಿಯವರ ಸ್ಪರ್ಧೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ನಿಖಿಲ್ ಕುಮಾರಸ್ವಾಮಿ ಇವೆಲ್ಲ ಊಹಾಪೋಹಗಳು ಅಷ್ಟೆ ಎಂದರು.