alex Certify BREAKING : ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ : ಹೈಕೋರ್ಟ್ ತೀರ್ಪಿನ ಬಳಿಕ CM ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ : ಹೈಕೋರ್ಟ್ ತೀರ್ಪಿನ ಬಳಿಕ CM ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ..!

ಬೆಂಗಳೂರು : ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ ಎಂದು ಹೈಕೋರ್ಟ್ ತೀರ್ಪಿನ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಹೈಕೋರ್ಟ್ ತೀರ್ಪಿನ ಬಳಿಕ ಸಿಎಂ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಹೈಕೋರ್ಟ್ ತೀರ್ಪಿನ ಬಗ್ಗೆ ಮಾಧ್ಯಮಗಳಲ್ಲಿನ ವರದಿ ಓದಿ ತಿಳಿದುಕೊಂಡಿದ್ದೇನೆ, ಹೈಕೋರ್ಟ್ ಆದೇಶದ ಪ್ರತಿ ಸಿಕ್ಕ ಬಳಿಕ ಈ ಬಗ್ಗೆ ಪ್ರತಿಕ್ರಿಯೆ ನೀಡುತ್ತೇನೆ ಎಂದರು. ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ, ಈ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತೇನೆ, ಬಳಿಕ ಕಾನೂನು ಹೋರಾಟದ ರೂಪು ರೇಷೆ ಸಿದ್ದಪಡಿಸುತ್ತೇವೆ ಎಂದರು.

ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ಆದೇಶ ಪ್ರತಿ ಪಡೆದು ಓದಿದ ಬಳಿಕ‌ ವಿಸ್ತೃತವಾದ ಪ್ರತಿಕ್ರಿಯೆ ನೀಡುತ್ತೇನೆ.ನ್ಯಾಯಾಲಯವು ಸೆಕ್ಷನ್ 218 ರ ಅಡಿ ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ನ್ಯಾಯಾಲಯ ಸಂಪೂರ್ಣವಾಗಿ ತಿರಸ್ಕರಿಸಿದೆ. ರಾಜ್ಯಪಾಲರ ಆದೇಶದಲ್ಲಿನ ಸೆಕ್ಷನ್ 17ಎ ಗೆ ಮಾತ್ರ ನ್ಯಾಯಮೂರ್ತಿಗಳು ಸೀಮಿತಗೊಳಿಸಿದ್ದಾರೆ.

ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನಿನ ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸುತ್ತೇನೆ. ಕಾನೂನು ತಜ್ಞರ ಜೊತೆ ಚರ್ಚಿಸಿ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ.

ದೂರುದಾರ ತನ್ನ ದೂರಿನಲ್ಲಿ ಸೆಕ್ಷನ್ 218 ಬಿಎನ್ಎಸ್ಎಸ್, 17 ಎ ಮತ್ತು 19 ಪಿಸಿ ಕಾಯಿದೆ ಪ್ರಕಾರ ತನಿಖೆ ಹಾಗೂ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದ್ದರು. ಆದರೆ, ರಾಜ್ಯಪಾಲರು ಪ್ರಾಥಮಿಕ ಹಂತದಲ್ಲಿ 19 ಪಿಸಿ ಕಾಯಿದೆ ಪ್ರಕಾರ ಕೇಳಿದ್ದ ಅಭಿಯೋಜನಾ ಅನುಮತಿ‌ ನಿರಾಕರಿಸಿದ್ದರು.

ಈ ದಿನ ಘನ ನ್ಯಾಯಾಲಯ ರಾಜ್ಯಪಾಲರು 218 ಬಿಎನ್ಎಸ್ಎಸ್ ಪ್ರಕಾರ ನೀಡಿರುವ ಅಭಿಯೋಜನಾ ಅನುಮತಿಯನ್ನು ಸ್ಪಷ್ಟವಾಗಿ ತಳ್ಳಿ ಹಾಕಿದೆ.ಮುಂದಿನ ದಿನಗಳಲ್ಲಿ ಸತ್ಯ ಹೊರಬಂದು 17ಎ ಅಡಿ ನೀಡಿರುವ ತನಿಖೆ ರದ್ದಾಗಲಿದೆ ಎಂಬ ದೃಢ ವಿಶ್ವಾಸ ನನಗಿದೆ.

ಈ ರಾಜಕೀಯ ಹೋರಾಟದಲ್ಲಿ ರಾಜ್ಯದ ಜನ ನನ್ನ ಹಿಂದೆ ಇದ್ದಾರೆ. ಅವರ ಆಶೀರ್ವಾದವೇ ನನಗೆ ಶ್ರೀರಕ್ಷೆ.
ಕಾನೂನು ಮತ್ತು ಸಂವಿಧಾನದಲ್ಲಿ ನನಗೆ ನಂಬಿಕೆ ಇದೆ. ಈ ಹೋರಾಟದಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಗಲಿದೆ.

ಇದು ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರದ ಸೇಡಿನ ರಾಜಕೀಯದ ವಿರುದ್ಧದ ಹೋರಾಟ. ಬಿಜೆಪಿ, ಜೆಡಿಎಸ್ ನ ಈ ಸೇಡಿನ ರಾಜಕೀಯದ ವಿರುದ್ಧ ನಮ್ಮ ನ್ಯಾಯಾಂಗದ ಹೋರಾಟ ಮುಂದುವರಿಯಲಿದೆ. ನ್ಯಾಯಾಲಯದ ಮೇಲೆ ನನಗೆ ನಂಬಿಕೆ ಇದೆ.

ನಮ್ಮ ಪಕ್ಷದ ಎಲ್ಲ ಶಾಸಕರು, ನಾಯಕರು ಮತ್ತು ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಹೈಕಮಾಂಡ್ ನನ್ನ ಪರವಾಗಿ ಭದ್ರವಾಗಿ ನಿಂತಿದ್ದು, ಕಾನೂನಿನ ಹೋರಾಟ ಮುಂದುವರಿಸುವಂತೆ ಉತ್ತೇಜನ ನೀಡಿದ್ದಾರೆ.

ನಾನು ಬಡವರ ಪರವಾಗಿದ್ದೇನೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದೇನೆ ಎನ್ನುವ ಕಾರಣಕ್ಕಾಗಿ ನನ್ನ ವಿರುದ್ದ ಬಿಜೆಪಿ, ಜೆಡಿಎಸ್ ರಾಜಕೀಯ ಪ್ರತಿಕಾರಕ್ಕೆ ಇಳಿದಿದೆ.ನನ್ನ 40 ವರ್ಷಗಳ ರಾಜಕೀಯ ಜೀವನದುದ್ದಕ್ಕೂ ಇಂತಹ ಸೇಡು, ಸಂಚಿನ ರಾಜಕೀಯವನ್ನು ಎದುರಿಸಿದ್ದೇನೆ ಮತ್ತು ರಾಜ್ಯದ ಜನರ ಆಶೀರ್ವಾದ, ಹಾರೈಕೆಯ ಬಲದಿಂದ ಗೆಲ್ಲುತ್ತಾ ಬಂದಿದ್ದೇನೆ. ಈ ಹೋರಾಟವನ್ನು ಜನತೆಯ ಆಶೀರ್ವಾದದ ಬಲದಿಂದ ಗೆಲ್ಲುತ್ತೇನೆ ಎಂಬ ವಿಶ್ವಾಸ ಇದೆ ಎಂದರು.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...