ಬೆಂಗಳೂರು: MI-17V5 ಹೆಲಿಕಾಪ್ಟರ್ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಐಎಎಫ್ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನು ಬೆಂಗಳೂರಿನ ಸೇನಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದ ಏಕೈಕ ಯೋಧ ವರುಣ್ ಸಿಂಗ್ ಅವರಿಗೆ ಶೇ.40ರಷ್ಟು ಸುಟ್ಟಗಾಯಗಳಾಗಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ತಮಿಳುನಾಡಿನ ವೆಲ್ಲಿಂಗ್ಟನ್ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಇದೀಗ ಬೆಂಗಳೂರಿನ ಸೇನಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಎಂದು ತಿಳಿದುಬಂದಿದೆ.
‘ಭಾರತದ ಅತಿ ದೊಡ್ಡ ಶತ್ರು ಪಾಕಿಸ್ತಾನವಲ್ಲ, ಚೀನಾ’: ಡ್ರ್ಯಾಗನ್ ರಾಷ್ಟ್ರದ ಬಗ್ಗೆ ಗುಡುಗಿದ್ದ ಬಿಪಿನ್ ರಾವತ್
ಸಿಡಿಎಸ್ ಬಿಪಿನ್ ರಾವತ್ ಸೇರಿದಂತೆ 14 ಜನರು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ನಿನ್ನೆ ತಮಿಳುನಾಡಿನ ಕುನೂರು ಬಳಿ ದುರಂತಕ್ಕೀಡಾಗಿತ್ತು. ಘಟನೆಯಲ್ಲಿ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ಸೇರಿದಂತೆ 13 ಜನರು ಸಾವನ್ನಪ್ಪಿದ್ದರು. ದುರಂತದಲ್ಲಿ ಗಾಯಗೊಂಡಿರುವ ಐಎಎಫ್ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಬದುಕುಳಿದಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.