
ನವದೆಹಲಿ: ಪಂಜಾಬ್ ನ ಮೊಗಾ ಸಮೀಪ ಭಾರತೀಯ ವಾಯುಪಡೆಗೆ ಸೇರಿದ ಮಿಗ್-21 ಯುದ್ಧವಿಮಾನ ಅಪಘಾತಕ್ಕೀಡಾಗಿದೆ.
ತಡರಾತ್ರಿ ದಿನನಿತ್ಯದ ತರಬೇತಿಯ ಹಂತದಲ್ಲಿದ್ದ ವಿಮಾನ ಪತನವಾಗಿದೆ. ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಈವರೆಗೆ ಯಾವುದೇ ಸಾವು ನೋವುಗಳು ವರದಿಯಾಗಿಲ್ಲ. ಘಟನೆಯ ತನಿಖೆಗೆ ಆದೇಶಿಸಲಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.