
ಬೆಂಗಳೂರು: ರಾಜ್ಯ ಸರ್ಕಾರ ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಪವನ್ ಕುಮಾರ್ ಮಾಲಪತಿ ಅವರನ್ನು ಬೆಂಗಳೂರು ಗ್ರಾಮೀಣ ಅಭಿವೃದ್ಧಿ ಕಮಿಷನರ್ ಆಗಿ ಮುಂದಿನ ಆದೇಶದ ವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ.
ಹುದ್ದೆಯ ನಿರೀಕ್ಷೆಯಲ್ಲಿದ್ದ ಕೆ.ಎನ್. ರಮೇಶ್ ಅವರನ್ನು ಸಮಗ್ರ ಶಿಕ್ಷಣ ಕರ್ನಾಟಕ ರಾಜ್ಯ ಯೋಜನಾ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ. ಬಳ್ಳಾರಿ ಜಿಲ್ಲೆಯ ಡೆಪ್ಯೂಟಿ ಕಮಿಷನರ್ ಆಗಿ ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನು ವರ್ಗಾವಣೆ ಮಾಡಲಾಗಿದೆ.