
ಬೆಂಗಳೂರು: ಮೂವರು ಜಿಲ್ಲಾಧಿಕಾರಿಗಳು ಸೇರಿದಂತೆ 7 ಮಂದಿ ಐಎಎಸ್ ಅಧಿಕಾರಿಗಳನ್ನು ಸರ್ಕಾರ ವರ್ಗಾವಣೆ ಮಾಡಿದೆ.
ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಾಗಿ ಆಮ್ಲಾನ್ ಆದಿತ್ಯ ಬಿಸ್ವಾಸ್, ಬೆಂಗಳೂರು ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕರಾಗಿ ಎಂ. ಸುಂದರೇಶ್ ಬಾಬು, ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿಯಾಗಿ ಸುರಲ್ಕರ್ ವಿಕಾಸ್ ಕಿಶೋರ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ದಾವಣಗೆರೆ ಜಿಲ್ಲಾಧಿಕಾರಿಯಾಗಿ ಶಿವಾನಂದ ಕಪಶಿ, ಗದಗ ಜಿಲ್ಲಾಧಿಕಾರಿಯಾಗಿ ಹೊನ್ನಾಂಬ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿ ಆರ್. ಲತಾ, ಉನ್ನತ ಶಿಕ್ಷಣ ಇಲಾಖೆ ಉಪ ಕಾರ್ಯದರ್ಶಿಯಾಗಿ ಲೋಖಂಡೆ ಸ್ನೇಹಲ್ ಸುಧಾಕರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಸಹಕಾರ ಸಂಘಗಳ ರಿಜಿಸ್ಟ್ರಾರ್ ಆಗಿ ಕ್ಯಾಪ್ಟನ್ ಕೆ. ರಾಜೇಂದ್ರ ಅವರನ್ನು ನೇಮಕ ಮಾಡಲಾಗಿದೆ.