alex Certify ಆಡಳಿತಕ್ಕೆ ಮೇಜರ್ ಸರ್ಜರಿ: 17 ಐಎಎಸ್ ಅಧಿಕಾರಿಗಳ ವರ್ಗಾವಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಡಳಿತಕ್ಕೆ ಮೇಜರ್ ಸರ್ಜರಿ: 17 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರ ಆಡಳಿತಕ್ಕೆ ಮೇಜರ್ ಸರ್ಜರಿ ಮಾಡಿದ್ದು, 17 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ನಾಲ್ವರು ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆ ನೀಡಲಾಗಿದ್ದು, ಹಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

ಮೈಸೂರು, ಮಂಡ್ಯ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿತ್ರದುರ್ಗ, ಹಾವೇರಿ, ಚಾಮರಾಜನಗರಕ್ಕೆ ಹೊಸ ಜಿಲ್ಲಾಧಿಕಾರಿಗಳನ್ನು ನೇಮಿಸಲಾಗಿದೆ.

ಕಂದಾಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕಪಿಲ್ ಮೋಹನ್ ಅವರನ್ನು ಪ್ರವಾಸೋದ್ಯಮ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಬಗಾದಿ ಗೌತಮ್ ಅವರನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ನಿರ್ದೇಶಕರ ಹುದ್ದೆಗೆ, ಉತ್ತರ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಅವರನ್ನು ಮೈಸೂರು ಜಿಲ್ಲಾಧಿಕಾರಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಟೀಕೆ ಅನಿಲ್ ಕುಮಾರ್ ಅವರಿಗೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಸ್ಥಾನದ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ಸಾರಿಗೆ ಇಲಾಖೆ ಕಾರ್ಯದರ್ಶಿ ಎನ್.ವಿ. ಪ್ರಸಾದ್ ಅವರಿಗೆ ಕಾರ್ಮಿಕ ಇಲಾಖೆ ಕಾರ್ಯದರ್ಶಿ ಸ್ಥಾನದ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದ್ದು, ಬೆಂಗಳೂರು ಜಲಮಂಡಳಿಯ ಅಧ್ಯಕ್ಷ ಎನ್. ಜಯರಾಮ್ ಅವರಿಗೆ ಕಂದಾಯ ಇಲಾಖೆ ಕಾರ್ಯದರ್ಶಿ ಹುದ್ದೆಗೆ ಹೆಚ್ಚುವರಿ ಹೊಣೆ ವಹಿಸಲಾಗಿದೆ.

ಹಟ್ಟಿ ಚಿನ್ನದ ಗಣಿ ವ್ಯವಸ್ಥಾಪಕ ನಿರ್ದೇಶಕ ಪ್ರಭುಲಿಂಗ ಕವಳಿಕಟ್ಟಿಯವರಿಗೆ ಉತ್ತರ ಕನ್ನಡ ಜಿಲ್ಲಾಧಿಕಾರಿ, ಹೆಚ್.ಎನ್. ಗೋಪಾಲಕೃಷ್ಣ ಅವರಿಗೆ ಮಂಡ್ಯ ಜಿಲ್ಲಾಧಿಕಾರಿ, ಜಿ.ಆರ್. ದಿವ್ಯ ಪ್ರಭು ಅವರಿಗೆ ಚಿತ್ರದುರ್ಗ ಜಿಲ್ಲಾಧಿಕಾರಿ, ರಘುನಂದನ ಮೂರ್ತಿ ಅವರಿಗೆ ಹಾವೇರಿ ಜಿಲ್ಲಾಧಿಕಾರಿ, ಡಿ.ಎಸ್. ರಮೇಶ ಅವರಿಗೆ ಚಾಮರಾಜನಗರ ಜಿಲ್ಲಾಧಿಕಾರಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಪಂ ಸಿ.ಯು. ಕುಮಾರ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹುದ್ದೆ ಹೆಚ್ಚು ಜವಾಬ್ದಾರಿ ನೀಡಲಾಗಿದೆ. ಶ್ರೀ ವಿದ್ಯಾ ಅವರಿಗೆ ಇ -ಆಡಳಿತ ಇಲಾಖೆಯ ಇ- ಆಡಳಿತ ಕೇಂದ್ರದ ಸಿಇಒ ಆಗಿ, ಕೆ.ಎಂ. ಜಾನಕಿ ಅವರಿಗೆ ಸಕಾಲ ಹೆಚ್ಚುವರಿ ಮಿಷನ್ ನಿರ್ದೇಶಕರಾಗಿ, ಎಸ್. ಅಶ್ವತಿ ಅವರಿಗೆ ಪಶು ಸಂಗೋಪನಾ ಇಲಾಖೆ ಆಯುಕ್ತರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಎಂ.ಎಸ್. ದಿವಾಕರ ಅವರನ್ನು ಚಿತ್ರದುರ್ಗ ಜಿಪಂ ಸಿಇಒ, ನಳಿನಿ ಅವರನ್ನು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯಮಾಪನ ಮಂಡಳಿಯ ಅಧ್ಯಕ್ಷರ ಹುದ್ದೆಗೆ ನಿಯೋಜಿಸಲಾಗಿದೆ.

ಭನ್ವಾರ್ ಸಿಂಗ್ ಮೀನಾ ಅವರನ್ನು ಕೆಪಿಎಸ್ಸಿ ಪರೀಕ್ಷಾ ನಿಯಂತ್ರಕ, ಪ್ರಕಾಶ್ ಜಿ.ಟಿ. ನಿಟ್ಟಾಲಿಯವರನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ, ಎಸ್. ಆಕಾಶ ಅವರನ್ನು ಕೊಡಗು ಜಿಪಂ ಸಿಇಒ ಆಗಿ ವರ್ಗಾವಣೆ ಮಾಡಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...