alex Certify ಇಬ್ಬರು ಐಎಎಸ್, ಇಬ್ಬರು ಕೆಎಎಸ್ ಅಧಿಕಾರಿಗಳ ವರ್ಗಾವಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಬ್ಬರು ಐಎಎಸ್, ಇಬ್ಬರು ಕೆಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಇಬ್ಬರು ಐಎಎಸ್ ಮತ್ತು ಇಬ್ಬರು ಕೆಎಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಬಿಬಿಎಂಪಿ(ಚುನಾವಣೆ) ವಿಶೇಷ ಆಯುಕ್ತರಾಗಿದ್ದ ಆರ್. ರಾಮಚಂದ್ರನ್ ಅವರನ್ನು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಅವರಿಂದ ತೆರವಾದ ಸ್ಥಾನಕ್ಕೆ ಡಾ.ಆರ್. ಸೆಲ್ವಮಣಿ ಅವರನ್ನು ವರ್ಗಾವಣೆ ಮಾಡಲಾಗಿದೆ.

ಇದರೊಂದಿಗೆ ಇಬ್ಬರು ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಕುವೆಂಪು ವಿವಿ ಕುಲಸಚಿವರಾಗಿ ಹೆಚ್.ಪಿ. ವಿಜಯಕುಮಾರ್, ಮಂಗಳೂರು ವಿವಿ ಕುಲಸಚಿವರಾಗಿ ರಾಜು ಮೊಗವೀರ ಅವರನ್ನು ವರ್ಗಾವಣೆ ಮಾಡಲಾಗಿದೆ.

ಚುನಾವಣಾ ಆಯೋಗದ ನಿರ್ದೇಶನದಂತೆ ನಿನ್ನೆಯಷ್ಟೇ 42 ಕೆಎಎಸ್ ಅಧಿಕಾರಿಗಳನ್ನು ಸರ್ಕಾರ ವರ್ಗಾವಣೆ ಮಾಡಿದ್ದು, ಚುನಾವಣೆ ಪ್ರಕ್ರಿಯೆ ಮುಕ್ತಾಯವಾದ ನಂತರ ಹಿಂದೆ ಕಾರ್ಯ ನಿರ್ವಹಿಸುತ್ತಿದ್ದ ಹುದ್ದೆಗಳಲ್ಲಿ ವರದಿ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...