
ಬೆಂಗಳೂರು: ನಾಲ್ವರು ಐಎಎಸ್ ಅಧಿಕಾರಿಗಳು, ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.
ರಾಜೇಂದ್ರ ಕುಮಾರ್ ಕಟಾರಿಯಾ – ಪ್ರಧಾನ ಕಾರ್ಯದರ್ಶಿ, ಕಂದಾಯ ಇಲಾಖೆ
ಪಂಕಜ್ ಕುಮಾರ್ ಪಾಂಡೆ – ವ್ಯವಸ್ಥಾಪಕ ನಿರ್ದೇಶಕ, ಕೆಪಿಟಿಸಿಎಲ್
ಡಾ. ಮಂಜುಳಾ – ಕಾರ್ಯದರ್ಶಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ
ಶರತ್ – ಎಂಡಿ, ಕರ್ನಾಟಕ ನಗರ ನೀರು ಸರಬರಾಜು ಒಳ ಚರಂಡಿ ಮಂಡಳಿ
ಬೆಂಗಳೂರು ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಅಧ್ಯಕ್ಷ ಎನ್. ಜಯರಾಮ್ ಅವರಿಗೆ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾರ್ಯದರ್ಶಿ ಹುದ್ದೆಯನ್ನು ಹೆಚ್ಚುವರಿಯಾಗಿ ವಹಿಸಲಾಗಿದೆ.
ಐಪಿಎಸ್ ಅಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ ಅವರನ್ನು ಬೆಂಗಳೂರು ವಿಧಿ ವಿಜ್ಞಾನ ಲ್ಯಾಬ್ ನಿರ್ದೇಶಕರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಐಪಿಎಸ್ ಅಧಿಕಾರಿ ಎಸ್. ಗಿರೀಶ್ ಅವರನ್ನು ವೈಟ್ ಫೀಲ್ಡ್ ಡಿಸಿಪಿಯಾಗಿ ನೇಮಕ ಮಾಡಲಾಗಿದೆ.