
ಬೆಂಗಳೂರು: ಇಬ್ಬರು ಐಎಎಸ್ ಅಧಿಕಾರಿಗಳನ್ನು ಶುಕ್ರವಾರ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಶಿವಾನಂದ ಕಪಶಿ ಅವರನ್ನು ಕೃಷಿ ಮಾರುಕಟ್ಟೆ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ. ಎನ್. ಸಿದ್ದೇಶ್ವರ ಅವರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರ ಸ್ಥಾನಕ್ಕೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.
ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಕಾರ್ಯದರ್ಶಿ ಡಾ. ಶಾಮ್ಲಾ ಇಕ್ಬಾಲ್ ಅವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ.